HomeKarnatakaBREAKING: ರಾಜ್ಯ ಸರ್ಕಾರದ ಶೂನ್ಯ ಬಜೆಟ್: ಚೊಂಬು ಹಿಡಿದು ಪ್ರತಿಭಟನೆ ನಡೆಸಿದ ಬಿಜೆಪಿ

BREAKING: ರಾಜ್ಯ ಸರ್ಕಾರದ ಶೂನ್ಯ ಬಜೆಟ್: ಚೊಂಬು ಹಿಡಿದು ಪ್ರತಿಭಟನೆ ನಡೆಸಿದ ಬಿಜೆಪಿ

ಬೆಂಗಳೂರು: ಮೂರು ಗಂಟೆ ಮೂವತ್ತು ನಿಮಿಷಗಳ ಕಾಲ ಸುದೀರ್ಘ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಶೂನ್ಯ ಬಜೆಟ್ ಎಂದು ಆರೋಪಿ ವಿಪಕ್ಷ ಬಿಜೆಪಿ ನಾಯಕರು ಚೊಂಬು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ವಿಧಾನಸೌಧದ ಪೂರ್ವ ದ್ವಾರದಿಂದ ಪಶ್ಚಿಮ ದ್ವಾರದವರೆಗೆ ಮೆರವಣಿಗೆ ಮಾಡಿದ ಬಿಜೆಪಿ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಚೊಂಬು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ರೈತರು, ಯುವ ಜನತೆ ಹಾಗೂ ಪರಿಶಿಷ್ಠ ಜಾತಿ, ಪಂಗಡ ಸಮುದಾಯಕ್ಕೆ ಮೋಸ ಮಾಡಿದ್ದಾರೆ. ಯಾವುದೇ ಪ್ರಮುಖ ಘೋಷಣೆಗಳನ್ನು ಮಾಡಿಲ್ಲ. ಇದೊಂದು ಶೂನ್ಯ ಬಜೆಟ್ ಎಂದು ಆಕ್ರೋಶ ವ್ಯಕ್ತಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಯುವ ಜನತೆಗೆ ಮೋಸ ಮಾಡಿದ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಧಿಕ್ಕಾರ… ರೈತರಿಗೆ, ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಪಂಗನಾಮ ಹಾಕಿದ ಕಾಂಗ್ರೆಸ್ ಬಜೆಟ್ ಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular