HomeLatest NewsBIG NEWS: ಸಂಪುಟ ಪುನರ್ ರಚನೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು: ಸಿಎಂ ಸಿದ್ದರಾಮಯ್ಯ

BIG NEWS: ಸಂಪುಟ ಪುನರ್ ರಚನೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು: ಸಿಎಂ ಸಿದ್ದರಾಮಯ್ಯ

ಚಿಕ್ಕಮಗಳೂರು: ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡಿರುವ ವಿಚಾರವಾಗಿ, ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ ರಚನೆ ಕಾರ್ಯ ಬಾಕಿಯಿದೆ. ಐದು ರಾಜ್ಯಗಳ ಚುನಾವಣೆ, ಬಜೆಟ್ ಅಧಿವೇಶನ ಸಂಪುಟ ಪುನರ್ ರಚನೆ ವಿಳಂಬಕ್ಕೆ ಕಾರಣವಿರಬಹುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಪಕ್ಷ ಸೋಲನ್ನು ಒಪ್ಪಿಕೊಂಡಿಲ್ಲ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವುದು ಖಂಡಿತ. ತಲೆದಂಡಕ್ಕೆ ಚುನಾವಣೆಯ ಸೋಲು ಗೆಲುವು ಕಾರಣವಲ್ಲ. ಸಲೀಂ ಅಹ್ಮದ್ ಅವರು ಪಕ್ಷದ ಮುಖಂಡರು. ಅವರು, ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಕೆಲವರ ಪಕ್ಷವಿರೋಧಿ ಕಾರ್ಯಗಳ ಬಗ್ಗೆ ಹೇಳಿಕೆ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆಯೇ ಹೊರತು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರಾಜಿತವಾಗಲಿದೆ ಎಂದು ಅವರು ಹೇಳಿರುವುದಿಲ್ಲ. ಪಕ್ಷವಿರೋಧಿ ಚಟುವಟಿಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದರು.

ಮಲೆನಾಡಿನಲ್ಲಿ ರೆಸಾರ್ಟ್ ಗಳಿಗೆ ಬೇಕಾಬಿಟ್ಟಿಯಾಗಿ ಅನುಮತಿ ನೀಡುತ್ತಿರುವ ಸರ್ಕಾರ, ಅರಣ್ಯವಾಸಿಗಳಿಗೆ ಹಕ್ಕು ಪತ್ರ ನೀಡುತ್ತಿಲ್ಲ ಎನ್ನುವ ವಿಚಾರವಾಗಿ ಅರಣ್ಯ ಇಲಾಖೆಯಿಂದ ಹಕ್ಕು ಪತ್ರ ನೀಡುವುದೂ ಸೇರಿದಂತೆ ಹಲವು ವಿಷಯದ ಬಗ್ಗೆ ಸಧ್ಯದಲ್ಲಿಯೇ ಸಭೆ ನಡೆಸಲಾಗುವುದು ಎಂದರು.

ಪ್ರವಾಸಿಗರಿಗೆ ಕರ್ನಾಟಕ ಸುರಕ್ಷಿತ ತಾಣವಲ್ಲ ಎಂದು ಕೇರಳ ರಾಜ್ಯದಿಂದ ಟೀಕೆಗಳು ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇರಳ ರಾಜ್ಯದ ಬಾಲಕಿ ಚಿಕ್ಕಮಗಳೂರಿಗೆ ಬಂದು ಮೃತಪಟ್ಟಿರುವ ವಿಷಯ ತನಿಖೆಯಾಗಲಿದೆ. ಆದರೆ ಕರ್ನಾಟಕ ರಾಜ್ಯ ಪ್ರವಾಸಿಗರಿಗೆ ಸುರಕ್ಷಿತವಲ್ಲ ಎಂಬುದು ಸತ್ಯಕ್ಕೆ ದೂರವಾದ ಮಾತು ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular