ಬೆಂಗಳೂರು: ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಕಮಿಷನ್ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿರುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ ಎಂದು ಹೇಳಿದರು.
ಬಿಜೆಪಿಯವರು ಬೇರೆ ಪಕ್ಷದವರ ಮೇಲೆ ಲಂಚದ ಆರೋಪವನ್ನು ಸುಲಭವಾಗಿ ಮಾಡುತ್ತಿದ್ದರು. ಆದರೆ ಈಗ ಬಿಜೆಪಿ ಶಾಸಕರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ. ಲೋಕಾಯುಕ್ತರ ತನಿಖೆ ನಡೆಯಲಿ ಎಂದು ತಿಳಿಸಿದರು.
ಗುತ್ತಿಗೆದಾರನಿಂದ ಕಮಿಷನ್ ಪಡೆಯುತ್ತಿದ್ದ ವೇಳೆ ಶಾಸಕ ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಪಿಎ ಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದರು. ಮೂವರಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡೊಸಿದೆ. ಈ ಮೂಲಕ ಚಂದ್ರು ಲಮಾಣಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.

