ಮೈಸೂರು: ನವೆಂಬರ್ ಕ್ರಾಂತಿ ಚರ್ಚೆ ನಡುವೆಯೇ ಕೆಲ ಸಚಿವರು, ಶಾಸಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಮತ್ತೊಂದೆಡೆ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆದಿದೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಯಕತ್ವ ಬದಲಾವಣೆ ವಿಚಾರವಾಗಿ, ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಪುನರುಚ್ಛರಿಸಿದ್ದಾರೆ.
ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ. ಬಜೆಟ್ ನ್ನು ಕೂಡ ನಾನೇ ಮಂಡಿಸುತ್ತೇನೆ. ಇದರಲ್ಲಿ ಅನುಮಾನ ಬೇಡ ಎಂದರು. ಇನ್ನು ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು. ಸಂಪುಟ ಪುನಾರಚನೆ, ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್ ನಾಯಕರ ನಿರ್ಧಾರ. ಅವರು ಏನು ನಿರ್ಧರ ತೆಗೆದುಕೊಳ್ಳುತ್ತೇವೋ ಅದಕ್ಕೆ ನಾನು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬದ್ಧರಾಗಿರುತ್ತೇವೆ ಎಂದರು.
ಇದೇವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಬೆಂಗಳೂರಿಗೆ ಆಗಮಿಸಲಿದ್ದು, ನಾಳೆ ಅವರನ್ನು ಭೇಟಿಯಾಗುತ್ತೇನೆ ಎಂದರು.
