HomeLatest NewsBREAKING: ಹೈವೋಲ್ಟೇಜ್ ಮೀಟಿಂಗ್ ಗೂ ಮುನ್ನಎಐಸಿಸಿ ಕಚೇರಿಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಮುಖಾಮುಖಿಯಾದ ಸಿಎಂ-ಡಿಸಿಎಂ

BREAKING: ಹೈವೋಲ್ಟೇಜ್ ಮೀಟಿಂಗ್ ಗೂ ಮುನ್ನಎಐಸಿಸಿ ಕಚೇರಿಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಮುಖಾಮುಖಿಯಾದ ಸಿಎಂ-ಡಿಸಿಎಂ

ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಕುರ್ಚಿ ಕಾದಾಟ ಇಂದು ಕ್ಲೈಮ್ಯಾಕ್ಸ್ ಹಂತ ತಲುಪಿದೆ. ನಾಯಕತ್ವ ಬದಲಾವಣೆ ವಿಚಾರದ ಭಾರಿ ಚರ್ಚೆ ನಡುವೆ ಹೈಕಮಾಂಡ್ ನಾಯಕರ ಬುಲಾಅವ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತ್ಯೇಕವಾಗಿ ದೆಹಲಿಗೆ ತೆರಳಿದ್ದಾರೆ. ಮುಖ್ಯಮಂತ್ರಿ ಬದಲಾವಣೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಎದ್ದಿರುವ ಗೊಂದಲಗಳಿಗೆ ಇಂದು ಕಾಂಗ್ರೆಸ್ ಹೈಕಾಂಡ್ ತೆರೆ ಎಳೆಯುವ ನಿರೀಕ್ಷೆ ಇದೆ.

ಈ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರು ಇಂದು ಮೂರು ಸುತ್ತಿನ ಸಭೆ ನಡೆಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಲಿದ್ದು, ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಅಭಿಪ್ರಾಯ ಕೇಳಲಿದ್ದಾರೆ. ಒನ್ ಟು ಒನ್ ಮೀಟಿಂಗ್ ಬಳಿಕ ಮಹತ್ವದ ಸಭೆ ನಡೆಯಲಿದೆ.

ಹೈಕಮಾಂಡ್ ನಾಯಕರ ಹೈವೋಲ್ಟೇಜ್ ಮೀಟಿಂಗ್ ಗೂ ಮುನ್ನ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯ ಎಐಸಿಸಿ ಕಚೇರಿಯ ಇಂದಿರಾ ಭವನದ ಪ್ರತ್ಯೇಕ ಕೊಠಡಿಯಲ್ಲಿ ಮುಖಾಮುಖಿಯಾದರು. ಈ ವೇಳೆ ಕೆಲ ಕಾಲ ಇಬ್ಬರು ಸಮಾಲೋಚನೆ ನಡೆಸಿದರು. ಇಬ್ಬರು ನಾಯಕರ ಚರ್ಚೆ ಬಳಿಕ ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಭೆಯಲ್ಲಿ ಉಪಸ್ಥಿತರಿದ್ದಾರೆ. ಕಾಂಗ್ರೆಸ್ ವರಿಷ್ಠರ ಈ ಸಭೆ ತೀವ್ರ ಕುತೂಹಲ ಮೂಡಿಸಿದ್ದು, ನಾಯಕತ್ವ ಬದಲಾವಣೆ ಗೊಂದಲಕ್ಕೆ ಇಂದೇ ತೆರೆ ಬೀಳುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular