HomeLatest NewsBREAKING: ಡಿಸಿಎಂ, ಗೃಹ ಸಚಿವರಿಗೆ ಸಿಎಂ ತುರ್ತು ಬುಲಾವ್: ಎಲ್ಲ ಕಾರ್ಯಕ್ರಮ ಮೊಟಕುಗೊಳಿಸಿ ಸಿಎಂ ನಿವಾಸಕ್ಕೆ...

BREAKING: ಡಿಸಿಎಂ, ಗೃಹ ಸಚಿವರಿಗೆ ಸಿಎಂ ತುರ್ತು ಬುಲಾವ್: ಎಲ್ಲ ಕಾರ್ಯಕ್ರಮ ಮೊಟಕುಗೊಳಿಸಿ ಸಿಎಂ ನಿವಾಸಕ್ಕೆ ದೌಡಾಯಿಸಿದ ಇಬ್ಬರು ನಾಯಕರು!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಡಾ.ಪರಮೇಶ್ವರ್ ಅವರಿಗೆ ತುರ್ತು ಬುಲಾವ್ ನೀಡಿದ್ದು ತೀವ್ರ ಕುತೂಹಲ ಮೂಡಿಸಿದೆ.

ಸಿಎಂ ಸಿದ್ದರಾಮಯ್ಯ ತಕ್ಷಣ ಸಭೆಗೆ ಬರುವಂತೆ ಬುಲಾವ್ ನೀಡಿರುವ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ಅರ್ಧಕ್ಕೆ ಮೊಟಕುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಪರಮೇಶ್ವರ್ ಸಿಎಂ ನಿವಾಸಕ್ಕೆ ದೌಡಾಯಿಸಿದ್ದಾರೆ.

ಕನಕಪುರದಲ್ಲಿ ಇದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ತುಮಕೂರಿನಲ್ಲಿ ಇದ್ದ ಗೃಹ ಸಚಿವ ಪರಮೇಶ್ವರ್ ಎಲಾ ಕಾರ್ಯಕ್ರಮಗಳನ್ನು ಮೊಟಕು ಗೊಳಿಸಿ ಬೆಂಗಳೂರಿನ ಸಿಎಂ ನಿವಾಸಕ್ಕೆ ಆಗಮಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಪ್ರಕರಣ ವಿಚಾರವಾಗಿ ಸಿಎಂ ನಿವಾಸದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಸಿಎಂ ಇಬ್ಬರು ನಾಯಕರಿಗೂ ದಿಢೀರ್ ಬುಲಾವ್ ನೀಡಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಕೂಡ ಭಾಗವಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular