ರಾಜ್ಯದಲ್ಲಿ ಮಳೆ ಕೊರತೆ; ಬರಗಾಲ ಘೋಷಣೆ ಬಗ್ಗೆ ಸಚಿವ ಸಂಪುಟ ಉಪಸಮಿತಿ ಸಭೆ ಬಳಿಕ ತೀರ್ಮಾನ; ಸಿಎಂ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದ್ದು, ರೈತರ ಬೆಳೆಗಳಿಗೂ ನೀರಿಲ್ಲದ ಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಉಪಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ಬರದ ಬಗ್ಗೆ ತೀರ್ಮಾನಿಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಬರದ ಛಾಯೆ ಆವರಿಸಿದ್ದು, ಇಂದು ಅಥವಾ ನಾಳೆ ನಡೆಯಲಿರುವ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಬರ ಘೋಷಣೆ ಬಗ್ಗೆ ತೀರ್ಮಾನಿಸಲಾಗುವುದು ಎಂದರು.

ಮೋಡ ಬಿತ್ತನೆ ಈವರೆಗೂ ಎಲ್ಲಿಯೂ ಯಶಸ್ವಿಯಾದ ಉದಾಹರಣೆ ಇಲ್ಲ. ಹಾಗಾಗಿ ಬರಗಾಲ ಘೋಷಣೆ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಗುವುದು. ಬರಗಾಲ ಘೋಷಣೆಯಾದ ಮೇಲೆ ಕೇಂದ್ರ ಸರ್ಕಾರಕ್ಕೆ ತಿಳಿಸಲಾಗುವುದು. ಕೇಂದ್ರ ಸರ್ಕಾರದವರು ಪರಿಶೀಲಿಸಿದ ನಂತರ ಎನ್.ಡಿ.ಆರ್.ಎಫ್ ಮಾರ್ಗಸೂಚಿಗಳ ಪ್ರಕಾರ ನೆರವು ನೀಡುತ್ತಾರೆ ಎಂದರು.

ಬರಗಾಲ ಎಂದು ಘೋಷಣೆಯಾದ ನಂತರ ಆ ತಾಲ್ಲೂಕುಗಳಲ್ಲಿ ಬರ ಪರಿಹಾರವಾಗಿ ಜನರಿಗೆ ಕೆಲಸ, ಮುಂತಾದ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗುವುದು ಎಂದರು.

ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಬಿಜೆಪಿ ದಿವಾಳಿಯಾಗಿದೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ನೂರು ದಿನಗಳಾದರೂ ಒಬ್ಬ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗಿಲ್ಲ. ಕರ್ನಾಟಕದ ಇತಿಹಾಸದಲ್ಲಿಯೇ ವಿರೋಧ ಪಕ್ಷಕ್ಕೆ ಇಂಥ ಪರಿಸ್ಥಿತಿ ಎದುರಾಗಿರಲ್ಲಿಲ್ಲ ಎಂದು ಟೀಕಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read