HomeKarnatakaBREAKING: ಬೌರಿಂಗ್ ಆಸ್ಪತ್ರೆ ದುರಂತ: ಆಸ್ಪತ್ರೆ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡ ಸಿಎಂ; ಕಾರ್ಯಪಾಲಕ ಇಂಜಿನಿಯರ್ ಸಸ್ಪೆಂಡ್...

BREAKING: ಬೌರಿಂಗ್ ಆಸ್ಪತ್ರೆ ದುರಂತ: ಆಸ್ಪತ್ರೆ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡ ಸಿಎಂ; ಕಾರ್ಯಪಾಲಕ ಇಂಜಿನಿಯರ್ ಸಸ್ಪೆಂಡ್ ಗೆ ಸೂಚನೆ

ಬೆಂಗಳೂರು: ಬೆಂಗಳೂರಿನಲ್ಲಿ ಏಪ್ರಿಲ್ 29ರಂದು ರ್ಸಂಜೆ ಕೇವಲ ಒಂದು ಗಂಟೆ ಸುರುದ ಬಿರುಗಾಳಿ ಸಹಿತ ಭಾರಿ ಮಳೆಗೆ ಬೌಂರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಜನರು ಸಾವನ್ನಪ್ಪಿದ ಪ್ರಕರಣ ಹಾಗೂ ಬೆಂಗಳೂರಿನಲ್ಲಿ ಮಳೆ ಅವಾಂತರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.

ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೌರಿಂಗ್ ಆಸ್ಪತ್ರೆಯ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆಸ್ಪತ್ರೆಯ ಸುತ್ತಮುತ್ತಲು ಗಮನಹರಿಸಿಲ್ಲ ಯಾಕೆ? ಎಂದು ಪ್ರಶ್ನಿಸಿದ್ದಾರೆ. ಕಾಂಪೌಂಡ್ ಕುಸಿದು 7 ಜನ ಅಮಾಯಕರು ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್ ನೀಡುವಂತೆ ಸೂಚಿಸಿದ್ದಾರೆ.

ಇದೇ ವೇಳೆ ಬೌರಿಂಗ್ ಆಸ್ಪತ್ರೆ ಗೋಡೆ ಹಾನಿಯಾಗುವಂತೆ ಮಣ್ಣು ಸುರಿದಿದ್ದು ಯಾಕೆ? ಮಣ್ಣು ಸುರಿದರೂ ಯಾಕೆ ನೀಡಿಕೊಳ್ಳಲಿಲ್ಲ? ಎಂದು ಕಾರ್ಯಪಾಲಕ ಇಂಜಿನಿಯರ್ ಅವರನ್ನು ಪ್ರಶ್ನಿಸಿದ್ದಾರೆ. ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ತಕ್ಷಣ ಅಮಾನತುಗೊಳಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular