HomeLive NewsBIG NEWS: ರಾಜ್ಯಪಾಲರ 2 ಸಾಲಿನ ಭಾಷಣದ ಮೇಲೆ ನಡೆದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ

BIG NEWS: ರಾಜ್ಯಪಾಲರ 2 ಸಾಲಿನ ಭಾಷಣದ ಮೇಲೆ ನಡೆದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ

ಬೆಂಗಳೂರು: ರಾಜ್ಯಪಾಲರ ಭಾಷಣದ ಮೇಲೆ ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಮಯ್ಯ ಉತ್ತರ ನೀಡಿದ್ದಾರೆ.

ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇವಲ ಎರಡು ಸಾಲಿನಲ್ಲಿ ಭಾಷಣ ಮುಗಿಸಿ ಸದನದಲ್ಲಿ ನಿರ್ಗಮಿಸಿದ್ದ ಘಟನೆ ಭಾರಿ ಚರ್ಚೆಗೆ ಕಾರಣವಾಗಿತ್ತು. ಇಂದು ವಿಧಾನಸಭೆಯಲ್ಲಿ ನಡೆದ ಚರ್ಚೆ ವೇಳೆ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರ ಭಾಷಣದ ಮೇಲೆ ಉತ್ತರ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋಗಿದ್ದಾರೆ. ಭಾಷಣದಲ್ಲಿದ್ದ “ಜೈ ಸಂವಿಧಾನ” ಎನ್ನುವುದನ್ನೂ ಉಲ್ಲೇಖಿಸದೆ, ಅದನ್ನು ಓದದೆ ಹೋದರು. ಜೈ ಕರ್ನಾಟಕದ ಜೊತೆಗೆ ಜೈ ಸಂವಿಧಾನ್ ಎಂಬುದು ಕೂಡ ಉಲ್ಲೇಖಿಸಲಾಗಿತ್ತು. ಆದರೆ ರಾಅಜ್ಯಪಾಲರು ಜೈ ಹಿಂದ್ ಎಂದಷ್ಟೇ ಹೇಳಿ ತೆರಳಿದ್ದಾರೆ. ರಾಷ್ಟ್ರಗೀತೆ ಮುಗಿಯುವವರೆಗಾದರೂ ಕಾಯುತ್ತಾರೆ ಎಂದುಕೊಂಡಿದ್ದೆವು. ಆದರೆ ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿದ್ದಾರೆ. ಇದು ಸರಿಯಲ್ಲ ಎಂದು ಹೇಳಿದರು.

ರಾಜ್ಯಪಾಲರ ಈ ನಡೆ ಬಗ್ಗೆ ಕಾನೂನಿನಲ್ಲಿ ಯಾವ ರೀತಿ ಹೋರಾಟ ನಡೆಸಬೇಕೆಂಬ ಬಗ್ಗೆ ಕಾಅನೂನು ತಜ್ಞರೊಂದಿಗೆ ಸಾಕಷ್ಟು ಚರ್ಚೆಗಳಾಗಿವೆ ಎಂದರು.

ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಮಾತಾಡುವಾಗ ನನ್ನನ್ನು “ಅಸಹಾಯಕ ಮುಖ್ಯಮಂತ್ರಿ” ಎಂದು ಕರೆದಿದ್ದಾರೆ. ಕೆಲವು ಬಾರಿ, “ಅಸತ್ಯದ ಎದುರು ಸತ್ಯ ಅಸಹಾಯಕವಾಗಿಬಿಡುತ್ತದೆ ಎಂದರು.

ನಾವು ರಾಜ್ಯಪಾಲರ ವಿರುದ್ಧ ಇಲ್ಲ. ಕೇಂದ್ರ ಸರ್ಕಾರದ ವಿರುದ್ಧ ಇದ್ದೇವೆ. ಮನರೇಗಾ ಬದಲಾಯಿಸಿ “ವಿಬಿ ಜಿ ರಾಮ್ ಜಿ” ಎಂದು ಮಾಡಿದ್ದಾರೆ. ಇದರಲ್ಲಿರುವ ರಾಮ, ಧಶರಥ ರಾಮನೂ ಅಲ್ಲ. ಅಯೋಧ್ಯೆ ರಾಮನೂ ಅಲ್ಲ. ಹೆಸರು ಬದಲಾಯಿಸುವುದಕ್ಕೇ ಕೆಲವರನ್ನು ಅವರು ಇಟ್ಟುಕೊಂಡಿದ್ದಾರೆ ಅನ್ನಿಸತ್ತೆ ಎಂದು ಕಿಡಿಕಾರಿದರು.

ಸಂವಿಧಾನದ ಆರ್ಟಿಕಲ್ 176 ಓದಿದ್ದರೆ ಚನ್ನಾಗಿರುತ್ತಿತ್ತು. ಸಂವಿಧಾನ ಜಾರಿಯಾದ ದಿನದಿಂದ ಇವತ್ತಿವರೆಗೆ ಜಂಟಿ ಅಧಿವೇಶನಗಳು ನಡೆದುಕೊಂಡು ಬಂದಿವೆ. ಇದು ಸಂವಿಧಾನದ ಪ್ರಕಾರ ನಡೆದುಕೊಂಡು ಬರುತ್ತಿರುವ ಪದ್ಧತಿ.

ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಜ್ ಅವರ ಬಾಯಲ್ಲೂ ಹೇಳಿಸಿದ್ದೀರಿ. ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ “ನರೇಗ ಉದ್ಯೋಗ ಸಂಜೀವಿನಿ” ಎಂದು ಕರೆದಿದ್ದರು. ಈಗ ಬಿಜೆಪಿ ಜೊತೆ ಸೇರಿ ನರೇಗಾ ವಿರೋಧಿಸುತ್ತಿದ್ದಾರೆ ಎಂದರು.

ರಾಜ್ಯಪಾಲರ ಭಾಷಣದ ಮೇಲೆ ವಿರೋಧಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ 15 ಜನ ಸದಸ್ಯರು ಮಾತನಾಡಿದ್ದಾರೆ. ಕಾಂಗ್ರೆಸ್ ನ ವಂದನಾ ನಿರ್ಣಯ ಮಂಡಿಸಿದ ಪೊನ್ನಣ್ಣ, ಮತ್ತು ಪ್ರದೀಪ್ ಈಶ್ವರ್ ರವರು ಅನುಮೋದನೆ ಮಾಡಿದ್ದಾರೆ. ಸುಮಾರು 9 ಜನ ಮಾತನಾಡಿದ್ದು, ಜೆಡಿಎಸ್ ನಿಂದ ಸುರೇಶ್ ಬಾಬುರವರು ಮತ್ತು ಪಕ್ಷೇತರರಲ್ಲಿ ಇಬ್ಬರು ಸೇರಿದಂತೆ ಒಟ್ಟು 27 ಜನ ಮಾತನಾಡಿದ್ದಾರೆ. ಕಾಂಗ್ರೆಸ್ 5 ಗಂಟೆ 18 , ಬಿಜೆಪಿಯವರು 8 ಗಂಟೆ 53 ನಿ , ಜೆಡಿಎಸ್ ನವರು 12 ನಿಮಿಷ ಮತ್ತು ಪಕ್ಷೇತರರು 54 ನಿಮಷ ಮಾತನಾಡಿದ್ದು, ಹೀಗೆ ಒಟ್ಟು 15 ಗಂಟೆ 17 ನಿಮಿಷ ಚರ್ಚೆ ನಡೆದಿದೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular