ಬೆಂಗಳೂರು: ಕಾಂಗ್ರೆಸ್ ನಾಯಕರು ಪ್ರಚಾರಕ್ಕಾಗಿ ವಿಬಿ-ಜಿ ರಾಮ್ ಜಿ ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಮನ್ ರೇಗಾ ಯೋಜನೆ ಬಗ್ಗೆ ಓಪನ್ ಡಿಬೇಟ್ ಮಾಡೋಣ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸವಾಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮನ್ ರೇಗಾ ಯೋಜನೆ ಬಗ್ಗೆ ನಾವು ಯಾವಾಗಲೂ ಚರ್ಚೆಗೆ ಸಿದ್ಧ ಎಂದು ಕುಮಾರಸ್ವಾಮಿ ಅವರಿಗೆ ಟಾಂಗ್ ನೀಡಿದ್ದಾರೆ.
ಯೋಜನೆ ಬಗ್ಗೆ ಚರ್ಚಿಸಲು ನಾವು ಯಾವಾಗಲೂ ಸಿದ್ಧ. ನಾವು ದೊಡ್ಡ ಆಂದೋಲನವನ್ನೇ ಮಾಡುತ್ತಿದ್ದೇವೆ. ಚರ್ಚೆಗೆ ಬರಲಿ ಎಂದು ತಿಳಿಸಿದ್ದಾರೆ.
ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ ಎಂಬ ಹೆಚ್.ಡಿ.ಕೆ ಹೇಳಿಕೆಗೆ, ಕುಮಾರಸ್ವಾಮಿ, ಬಿಜೆಪಿಯವರು ಬರೀ ಸುಳ್ಳು ಹೇಳ್ತಾರೆ. ಅವರಿಗೆಲ್ಲಾ ಉತ್ತರ ಕೊಡ್ತಾ ಕೂತ್ಕೊಳ್ಳೋಕೆ ಆಗುತ್ತಾ? ಎಂದು ತಿರುಗೇಟು ನೀಡಿದ್ದಾರೆ.

