BIG NEWS: ಕುಣಿಯಲಾರದವರು ನೆಲಡೊಂಕು ಎಂದರಂತೆ…..HDK ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಮೈತ್ರಿ ಸರ್ಕಾರ ಕೆಡವಲು ಸಿದ್ದರಾಮಯ್ಯರವರೂ ಕಾರಣರು ಎಂಬ ಮಾಜಿ ಸಿಎಂ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕುಣಿಯಲಾರದವರು ನೆಲಡೊಂಕು ಎಂದು ಹೇಳುವಂತೆ ತಮಗೆ ಸರ್ಕಾರವನ್ನು ಉಳಿಸಿಕೊಳ್ಳಲು ಸಾಧ್ಯವಾಗದ ಕಾರಣ , ಬೇರೆಯವರ ಮೇಲೆ ಆರೋಪವನ್ನು ಹೊರಿಸಿರುವುದು ನಿರರ್ಥಕ ಎಂದು ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿಯವರು ವಿಶ್ವಕಪ್ ಕ್ರಿಕೆಟ್ ವೀಕ್ಷಿಸಲು ತೆರಳಿದ್ದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಟೀಕೆಗೆ, ಕ್ರಿಕೆಟ್ ಕ್ರೀಡೆಯನ್ನು ಬೆಂಬಲಿಸಲು ತೆರಳಿದ್ದೆ. ಕುಮಾರಸ್ವಾಮಿ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಇದ್ದ ಕಾರಣವನ್ನು ಮೊದಲು ತಿಳಿಸಲಿ ಎಂದು ಟಾಂಗ್ ನೀಡಿದರು.

ಮುಖ್ಯಮಂತ್ರಿಗಳು ವಸತಿಗೃಹವನ್ನು ಹಿಂದಿರುಗಿಸಿಲ್ಲ ಎಂಬ ಆರೋಪಕ್ಕೆ, ಯಡಿಯೂರಪ್ಪನವರೂ ಕಾವೇರಿಯಲ್ಲಿ ಕಡೆಯತನಕ ವಾಸವಿದ್ದರು. ಜಾರ್ಜ್ ಅವರಿಗೆ ಹಂಚಿಕೆಯಾಗಿದ್ದ ವಸತಿಗೃಹದಲ್ಲಿ ನಾನು ವಾಸವಿದ್ದೆ. ನಾನು ವಾಸವಿದ್ದ ವಸತಿಗೃಹ ಮೀಸಲಾದ ವಸತಿಗೃಹವಲ್ಲ. ಅದರಲ್ಲಿ ಯಾರು ಬೇಕಾದರೂ ವಾಸವಿರಬಹುದು ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read