BIG NEWS: ಸಿಎಂ ಸಿದ್ದರಾಮಯ್ಯ ಜನತಾದರ್ಶನಕ್ಕೆ ವಿಪಕ್ಷ ಬಿಜೆಪಿ ವಾಗ್ದಾಳಿ

ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಜನತಾದರ್ಶನ ಮಾಡುತ್ತಿದ್ದು, ಸಾರ್ವಜನಿಕರ ಅಹವಾಲು ಸ್ವೀಕರಿಸಿತ್ತಿದ್ದಾರೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಜನಸ್ಪಂದನೆ ಕಾರ್ಯಕ್ರಮದ ವಿರುದ್ಧ ವಿಪಕ್ಷ ಬಿಜೆಪಿ ವಾಗ್ದಾಳಿ ನಡೆಸಿದೆ.

ಕನ್ನಡಿಗರ ಕಿವಿ ಮೇಲೆ ಹೂವಿಟ್ಟು ಛೀ ಥೂ ಎನಿಸಿಕೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯನವರಿಗೆ ಜನತಾ ದರ್ಶನದಲ್ಲಿ ಎದುರಾಗುವ ಪ್ರಶ್ನೆಗಳಿವು ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಮೋದಿ ಸರ್ಕಾರದ 5 ಕೆಜಿ ಅಕ್ಕಿ ನೀವು ಕೊಡುತ್ತಿಲ್ಲ ಏಕೆ? ನೀವೇ ಹೇಳಿದ 10 ಕೆಜಿ ಅಕ್ಕಿಯನ್ನು ಕೊಡುತ್ತಿಲ್ಲ ಏಕೆ? ಗೃಹಲಕ್ಷ್ಮೀ ಹೆಸರಲ್ಲಿ ಸ್ವಾಭಿಮಾನಿ ಮಹಿಳೆಯನ್ನು ವಂಚಿಸಿದ್ದು ಏಕೆ? ಲೂಟಿ ಮಾಡಿ ಹೈಕಮಾಂಡ್ ಹೊಟ್ಟೆ ತುಂಬಿಸುತ್ತಿರುವುದು ಸರಿಯೇ? ಬರಗಾಲ ನಿರ್ವಹಣೆ ಮಾಡಿಲ್ಲ, ಪರಿಹಾರವನ್ನೂ ಕೊಟ್ಟಿಲ್ಲ ಏಕೆ? ಜನರು ಸಂಕಷ್ಟದಲ್ಲಿರುವಾಗ ನಿಮಗೆ ಪಂಚರಾಜ್ಯ ಚುನಾವಣೆ ಮುಖ್ಯವೇ? ಕಾವೇರಿಯನ್ನು ಕಳ್ಳತನದಿಂದ ಬಿಟ್ಟು ನಮಗೆ ವಂಚಿಸಿದ್ದು ಏಕೆ? ಸ್ವಯಂಘೋಷುತ ಆರ್ಥಿಕ ತಜ್ಞ ಮಜವಾದಿ ಸಿದ್ದರಾಮಯ್ಯ ಸಿಎಂ ಬಳಿ ಜನರ ಈ ಪ್ರಶ್ನೆಗಳಿಗೆ ಒಂದಕ್ಕಾದರೂ ಉತ್ತರವಿದೆಯೇ? ಎಂದು ಪ್ರಶ್ನಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read