BIG NEWS: ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಮಂಗಳೂರು: ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್ಐಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ ಮಾತನಾಡಿದ್ದಾರೆ ಎಂದರು.

ಇನ್ನು ಧರ್ಮಸ್ಥಳ ಪ್ರಕರಣದ ಬಗ್ಗೆ ಎಸ್ಐಟಿ ವರದಿ ಸಲ್ಲಿಕೆ ಬಗ್ಗೆ, ಎಸ್ಐಟಿಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಈ ತಿಂಗಳಾಂತ್ಯದಲ್ಲಿ ಎಸ್ಐಟಿ ವರದಿ ಸಲ್ಲಿಕೆಯಾಗಲಿದೆ ಎಂದು ಎಸ್ ಐ ಟಿ ತಿಳಿಸಿರುವುದಾಗಿ ಗೃಹಸಚಿವರು ಹೇಳಿದ್ದಾರೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read