HomeKarnatakaBUDGET BREAKING: ಕಟ್ಟಡ ಕಾರ್ಮಿಕರು ಹಾಗೂ ಮಕ್ಕಳ ಶಿಕ್ಷಣಕ್ಕೆ ಬಜೆಟ್ ನಲ್ಲಿ ಭರ್ಜರಿ ಕೊಡುಗೆ

BUDGET BREAKING: ಕಟ್ಟಡ ಕಾರ್ಮಿಕರು ಹಾಗೂ ಮಕ್ಕಳ ಶಿಕ್ಷಣಕ್ಕೆ ಬಜೆಟ್ ನಲ್ಲಿ ಭರ್ಜರಿ ಕೊಡುಗೆ

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ನೌಕರರನ್ನೊಳಗೊಂಡಂತೆ ವಿವಿಧ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಯರಿಗೆ ಋತುಚಕ್ರದ ಸಮಯದಲ್ಲಿ ಒಂದು ದಿನದ ವೇತನ ಸಹಿತ ರಜೆಯನ್ನು ಪಡೆಯಲು ಅವಕಾಶ ಮಾಡಿಕೊಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.

ಕರ್ನಾಟಕ ರಾಜ್ಯ ಕಾರ್ಮಿಕರ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರಿಗೆ ಮತ್ತು ಅವರ ಕುಟುಂಬದ ಅವಲಂಬಿತರಿಗೆ ವಿವಿಧ ಕಲ್ಯಾಣ ಕಾರ್ಯಕ್ರಮಗಳಡಿ ಒಟ್ಟು 43,936 ಅರ್ಹ ಫಲಾನುಭವಿಗಳಿಗೆ ಒಟ್ಟು 39 ಕೋಟಿ ರೂ.ಗಳ ಧನಸಹಾಯ ನೀಡಲಾಗಿದೆ.

ಆಶಾದೀಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಒಟ್ಟು 5,062 ಅಭ್ಯರ್ಥಿಗಳ ಪರವಾಗಿ 18 ಕೋಟಿ ರೂ.ಗಳನ್ನು ಅರ್ಹ ಉದ್ಯೋಗದಾತರಿಗೆ ಮರುಪಾವತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಟ್ಟಡ ಕಾರ್ಮಿಕರ ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಲು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ
ವತಿಯಿಂದ ತಲಾ 60 ಕೋಟಿ ರೂ. ವೆಚ್ಚದಲ್ಲಿ 10 GTTC ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಇದಕ್ಕಾಗಿ ಒಟ್ಟಾರೆ 600 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು.

6 ರಿಂದ 12ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ 2025-26ನೇ ಸಾಲಿನಲ್ಲಿ 42 ಶ್ರಮಿಕ ವಸತಿ ಶಾಲೆಗಳನ್ನು ಅನುಮೋದಿಸಲಾಗಿದೆ. 2026-27ನೇ ಸಾಲಿನಲ್ಲಿ ಹೆಚ್ಚುವರಿಯಾಗಿ 62 ಶ್ರಮಿಕ ವಸತಿ ಶಾಲೆಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಎಲ್ಲಾ 104 ಶಾಲೆಗಳನ್ನು ಬಾಡಿಗೆ ಕಟ್ಟಡಗಳಲ್ಲಿ ಪ್ರಾರಂಭಿಸಲಾಗುವುದು. (ಅನುಬಂಧ-4 ಮತ್ತು 5)

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರು ಹಾಗೂ ಅವರ ಮಕ್ಕಳಿಗೆ ವೃತ್ತಿ ಬುನಾದಿ ಹಾಗೂ ಉನ್ನತಿ ಕೌಶಲ್ಯ ತರಬೇತಿಯನ್ನು ನೀಡಲು ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಅತ್ಯಾಧುನಿಕ ಮೂಲಸೌಕರ್ಯವನ್ನು ಅಕಾಡೆಮಿಯನ್ನು ಸ್ಥಾಪಿಸಲಾಗುವುದು.

ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಕೌಶಲ್ಯಾಧಾರಿತ ಉದ್ಯೋಗ ದೊರಕಿಸಿಕೊಡುವ ಉದ್ದೇಶದಿಂದ ಆನ್‌ಲೈನ ಉದ್ಯೋಗ ವಿನಿಮಯ ಕೇಂದ್ರವನ್ನು ಸ್ಥಾಪಿಸುವ ‘ಕಾಯಕ ಭಾಗ್ಯ’ ಎಂಬ ಯೋಜನೆಯನ್ನು ಐದು ಕೋಟಿ ರೂ. ವೆಚ್ಚದಲ್ಲಿ ಜಾರಿಗೆ ತರಲಾಗುವುದು.

ಕಾರ್ಮಿಕ ರಾಜ್ಯ ವಿಮಾ ಸೊಸೈಟಿಯ ರಚನೆಯಿಂದಾಗಿ ಪ್ರಸ್ತುತ ನೀಡಲಾಗುತ್ತಿರುವ ವೈದ್ಯಕೀಯ ಸೇವೆಗಳನ್ನು 50 ಲಕ್ಷ ವಿಮಾದಾರರಿಗೆ ಹಾಗೂ 150 ಲಕ್ಷ ಅವಲಂಬಿತರಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ಒದಗಿಸಲಾಗುವುದು. ಈ ಸೊಸೈಟಿಯ ಮುಖಾಂತರ ಕೆಳಕಂಡ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು.

ಹುಬ್ಬಳ್ಳಿ, ಇಂದಿರಾನಗರ, ಮೈಸೂರು ಮತ್ತು ದೊಡ್ಡಬಳ್ಳಾಪುರದಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ಹಾಗೂ ಇಂದಿರಾನಗರದಲ್ಲಿ ಮೂರು ವರ್ಷದ PG (DNB) ಕೋರ್ಸ್ ಗಳನ್ನು ಪ್ರಾರಂಭಿಸಲಾಗುವುದು;

Breast and Cervical Cancer Cancer ತಡೆಗಟ್ಟುವ ಲಸಿಕಾ Cervical ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಲಾಗುವುದು.

ರಾಯಚೂರು, ವಿಜಯಪುರ, ಬಾಗಲಕೋಟೆ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆ.ಜಿ.ಎಫ್ ಮತ್ತು ಚಿಕ್ಕಮಗಳೂರಿನಲ್ಲಿರುವ ಕಾರ್ಮಿಕ ರಾಜ್ಯ ವಿಮಾ (ESI) ಚಿಕಿತ್ಸಾಲಯಗಳನ್ನು ಉನ್ನತೀಕರಿಸಲಾಗುವುದು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular