HomeKarnatakaಯುವ ಸಬಲೀಕರಣ ಮತ್ತು ಕ್ರೀಡೆಗೆ ಬಜೆಟ್​​ನಲ್ಲಿ ಸಿಕ್ಕಿದ್ದೇನು?

ಯುವ ಸಬಲೀಕರಣ ಮತ್ತು ಕ್ರೀಡೆಗೆ ಬಜೆಟ್​​ನಲ್ಲಿ ಸಿಕ್ಕಿದ್ದೇನು?

ಬೆಂಗಳೂರು: ಸಶಕ್ತ ಕರ್ನಾಟಕ ಕಾರ್ಯಕ್ರಮದಡಿ ಬೆಳಗಾವಿ, ಗೋಕರ್ಣ, ಚಿತ್ರದುರ್ಗ, ಹಂಪಿಯಲ್ಲಿ ರಾಷ್ಟ್ರಮಟ್ಟದ ಮ್ಯಾರಥಾನ್‌ಗಳನ್ನು ತಲಾ 10 ಲಕ್ಷ ರೂ. ವೆಚ್ಚದಲ್ಲಿ ಆಯೋಜಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.

ಇದರೊಂದಿಗೆ 10 ಜಿಲ್ಲಾ ಕೇಂದ್ರಗಳಲ್ಲಿ ತಲಾ ನಾಲ್ಕು ಲಕ್ಷ ರೂ. ವೆಚ್ಚದಲ್ಲಿ ಜಿಲ್ಲಾ ಮಟ್ಟದ ಮ್ಯಾರಥಾನ್‌ಗಳನ್ನು ಪ್ರಸಿದ್ಧ ಕ್ರೀಡಾಪಟುಗಳ ಹೆಸರಿನಲ್ಲಿ ಆಯೋಜನೆ ಮಾಡಲಾಗುವುದು.

ಸೈಕ್ಲಿಂಗ್‌ ಕ್ರೀಡೆಗೆ ಉತ್ತೇಜನ ನೀಡಲು ಮೈಸೂರಿನಲ್ಲಿರುವ ದಟ್ಟಗಳ್ಳಿಯಲ್ಲಿ ಗುರುತಿಸಲಾದ ಜಾಗದಲ್ಲಿ ಆಧುನಿಕ ಸೈಕ್ಲಿಂಗ್‌ ವೆಲೋಡ್ರೋಮ್‌ ನಿರ್ಮಿಸಲಾಗುವುದು. ಬಂಗಾರಪೇಟೆ, ಮುದ್ದೇಬಿಹಾಳ, ಗುಳೇದಗುಡ್ಡ, ಕನಕಪುರ, ಕುಕನೂರು ಮತ್ತು ಮಸ್ಕಿಯಲ್ಲಿ ತಾಲ್ಲೂಕು ಕ್ರೀಡಾಂಗಣಗಳನ್ನು ತಲಾ ಎರಡು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಲ್ಯಾಣ ಕರ್ನಾಟಕ ಭಾಗದ ಕ್ರೀಡಾಪಟುಗಳಿಗೆ ಉತ್ತಮ ಕ್ರೀಡಾ ವಿಜ್ಞಾನ ಸೇವೆಗಳನ್ನು ಒದಗಿಸಲು ಕಲಬುರಗಿಯಲ್ಲಿ ಆಧುನಿಕ ಕ್ರೀಡಾ ವಿಜ್ಞಾನ ಕೇಂದ್ರವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಆರಂಭಿಸಲಾಗುವುದು. ತುಮಕೂರಿನಲ್ಲಿ ಕ್ರೀಡಾ ಮೂಲಸೌಕರ್ಯಗಳನ್ನು ಮೂರು ಕೋಟಿ ರೂ.ಗಳ ವೆಚ್ಚದಲ್ಲಿ ಉನ್ನತೀಕರಿಸಲಾಗುವುದು.

ವಿಜಯನಗರ ಜಿಲ್ಲೆಯಲ್ಲಿರುವ ಕ್ರೀಡಾಂಗಣವನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮತ್ತು KMERC ಅನುದಾನದಲ್ಲಿ ಮೇಲ್ದರ್ಜೆಗೇರಿಸಲಾಗುವುದು. ಮಕ್ಕಳ ಕ್ರೀಡಾ ಪ್ರತಿಭೆಯನ್ನು ಪ್ರೋತ್ಸಾಹಿಸಲು ಸುಸಜ್ಜಿತ ಕ್ರೀಡಾ ತರಬೇತಿ ವಸತಿ ನಿಲಯವನ್ನು ವಿರಾಜಪೇಟೆಯಲ್ಲಿ ನಿರ್ಮಿಸಲು ಕ್ರಮಕೈಗೊಳ್ಳಲಾಗುವುದು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular