HomeEntertainmentಬಜೆಟ್ ನಲ್ಲಿ ಚಿತ್ರರಂಗಕ್ಕೆ ಸಿಕ್ಕಿದ್ದೇನು?

ಬಜೆಟ್ ನಲ್ಲಿ ಚಿತ್ರರಂಗಕ್ಕೆ ಸಿಕ್ಕಿದ್ದೇನು?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 17ನೇ ಬಾರಿ ಬಜೆಟ್ ಮಂಡಿಸಿದ್ದು, ವಿವಿಧ ಕ್ಷೇತ್ರಗಳಿಗೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದೇ ರೀತಿ ಕನ್ನಡ ಚಿತ್ರರಂಗಕ್ಕೂ ಹಲವು ಕೊಡುಗೆಗಳನ್ನು ಘೋಷಿಸಿದ್ದಾರೆ.

ಹೆಸರಘಟ್ಟದಲ್ಲಿರುವ ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ನಡೆಸಲಾಗುತ್ತಿರುವ ಸೌಂಡ್ ರೆಕಾರ್ಡಿಂಗ್ ಮತ್ತು ಇಂಜಿನಿಯರಿಂಗ್ ಹಾಗೂ ಸಿನಿಮಾಟೊಗ್ರಫಿ ಕೋರ್ಸುಗಳಿಗೆ ಅಗತ್ಯವಿರುವ ಆಧುನಿಕ ಉಪಕರಣಗಳನ್ನು ಒದಗಿಸಲಾಗುವುದು.

ರಾಜ್ಯದಲ್ಲಿ ಚಲನಚಿತ್ರ ಹಾಗೂ ಇತರೆ ಚಿತ್ರೀಕರಣಗಳಿಗೆ ಅಗತ್ಯವಿರುವ ವಿವಿಧ ಇಲಾಖೆಗಳ ಅನುಮತಿಗಳನ್ನು ಏಕಗವಾಕ್ಷಿ ವ್ಯವಸ್ಥೆಯಲ್ಲಿ ಒಂದೇ ವೇದಿಕೆಯಲ್ಲಿ ನೀಡುವ ಸಲುವಾಗಿ ‘ಸಿನಿ ಮಿತ್ರ’ ಎಂಬ ಆನ್‌ಲೈನ್ ಡಿಜಿಟಲ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು. ಚಿತ್ರೀಕರಣಕ್ಕೆ ಅನುಮತಿ ಪಡೆಯುವುದು ಇದರಿಂದ ಸುಲಭವಾಗುವ ಜೊತೆಗೆ ನಿಯಮಗಳ ಪಾಲನೆ ಕಡ್ಡಾಯ ಆಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುಣಾತ್ಮಕ ಚಲನಚಿತ್ರಗಳಿಗೆ ನೀಡಲಾಗುತ್ತಿದ್ದ ಸಹಾಯಧನವು ಕೆಲವು ವರ್ಷಗಳಿಂದ ಸ್ಥಗಿತಗೊಂಡಿದ್ದು, 2025-26 ನೇ ಸಾಲಿನಲ್ಲಿ ಮೂರು ವರ್ಷಗಳ ಚಲನಚಿತ್ರಗಳನ್ನು ಗುರುತಿಸಿ ನಮ್ಮ ಸರ್ಕಾರದಲ್ಲಿ ಸಹಾಯಧನವನ್ನು ನೀಡಲಾಗಿರುತ್ತದೆ. ಪ್ರಸಕ್ತ ಸಾಲಿಗೆ ಉಳಿದ ಮೂರು ವರ್ಷಗಳ ಚಲನಚಿತ್ರಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಸಹಾಯಧನವನ್ನು ನೀಡಲು 20 ಕೋಟಿ ರೂ. ಗಳನ್ನು ಒದಗಿಸಲಾಗುವುದು.

ಮೈಸೂರು ಫಿಲ್ಮ್ ಸಿಟಿಯನ್ನು ಸ್ಥಾಪಿಸಲು ಈ ಸಾಲಿನಲ್ಲಿ 500 ಕೋಟಿ ರೂ.ಗಳಿಗೆ ಅನುಮೋದನೆ ನೀಡಲಾಗಿದೆ. ಫಿಲ್ಮ್ ಸಿಟಿ ಸೌಲಭ್ಯಗಳನ್ನು ಒಳಗೊಂಡಂತೆ ಪ್ರವಾಸಿಗರಿಗೆ ಅನುಕೂಲವಾಗುವಂತೆ ಥೀಮ್ ಪಾರ್ಕ್, ಸ್ಟಾರ್ ಹೋಟೆಲ್ ಮತ್ತು ರೆಸಾರ್ಟ್‌ಗಳನ್ನು ಒಳಗೊಂಡ PPP (ಪಬ್ಲಿಕ್ ಪ್ರೈವೇಟ್ ಪಾರ್ಟನರ್​​ಶಿಪ್) ಮಾದರಿಯಲ್ಲಿ ಅಭಿವೃದ್ಧಿಗೆ ಅನುಮೋದನೆ ನೀಡಿ ವ್ಯವಹಾರ ನಡೆಸಬೇಕೆಂದು ತೀರ್ಮಾನಿಸಲಾಗಿದೆ.

ಕನ್ನಡ ಚಿತ್ರರಂಗದ ಹಿರಿಯ ಮತ್ತು ಲಿಜೆಂಡರಿ ನಿರ್ದೇಶಕ ಆಗಿರುವ ಪುಟ್ಟಣ್ಣ ಕಣಗಾಲ್ ಅವರ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ರೂಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular