ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಬಜೆಟ್-2026-27 ಮಂಡಿಸುತ್ತಿದ್ದು, ಹಲವಾರು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.
ತಮ್ಮ ಬಜೆಟ್ ಭಾಷಣದಲ್ಲಿ 60 ಕೋಟಿ ರೂ. ವೆಚ್ಚದಲ್ಲಿ ನೂತನ 10 GTTC ಕೇಂದ್ರಗಳ ಸ್ಥಾಪನೆ ಮಾಡಲಾಗುತ್ತದೆ ಎಂದು ಘೋಷಿಸಿದ್ದಾರೆ.
ಕಾರ್ಮಿಕರ ಮಕ್ಕಳಿಗಾಗಿ ನೂತನ 62 ವಸತಿ ಶ್ರಮಿಕ ಶಾಲೆ ಆರಂಭಿಸಲಾಗುತ್ತದೆ. ಒಟ್ಟು 104 ಶಾಲೆಗಳ ಆರಂಭಕ್ಕೆ ಆದ್ಯತೆ ನೀಡಲಾಗುತ್ತದೆ. ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಕೌಶಲ್ಯ ತರಬೇತಿ ಅಕಾಡೆಮಿ ತೆರೆಯಲಾಗುತ್ತದೆ.
200 ಕೋಟಿ ರೂಪಾಯಿ ವೆಚ್ಚದಲ್ಲಿ ಅಕಾಡೆಮಿ ಸ್ಥಾಪನೆ ಮಾಡಲಾಗುತ್ತದೆ. ಕಾರ್ಮಿಕರ ವಿಮಾ ಸೊಸೈಟಿಯಿಂದ ಹುಬ್ಬಳ್ಳಿ, ಇಂದಿರಾನಗರ , ಮೈಸೂರು, ದೊಡ್ಡ ಬಳ್ಳಾಪುರದಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ಆರಂಭಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.

