HomeKarnatakaBUDGET BREAKING: ಬೆಂಗಳೂರಲ್ಲಿ ಸ್ತನ, ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರ ಸ್ಥಾಪನೆ

BUDGET BREAKING: ಬೆಂಗಳೂರಲ್ಲಿ ಸ್ತನ, ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರ ಸ್ಥಾಪನೆ

ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬೆಂಗಳೂರಲ್ಲಿ ಸ್ತನ, ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ. ರಾಯಚೂರು, ಬಾಗಲಕೋಟೆ, ವಿಜಯಪುರ, ಬೀದರ್‌, ಕೊಪ್ಪಳ ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆಜಿಎಫ್‌ನಲ್ಲಿ ESI ಆಸ್ಪತ್ರೆ ಉನ್ನತೀಕರಣಗೊಳಿಸುವುದಾಗಿ ಸಿದ್ದರಾಮಯ್ಯತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಗ್ಯ ಇಲಾಖೆ ಮೂಲ ಸೌಕರ್ಯ ಅಭಿವೃದ್ಧಿಗೆ 900 ಕೋಟಿ ರೂ. ಮೀಸಲಿಡಲಾಗುವುದು. ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ ಟ್ರಾಮಾ ಕೇರ್ ಸೆಂಟರ್ ತೆರೆಯಲಾಗುವುದು. ಐಸಿಯುಗಳಿಗೆ ಉಪಕರಣ ಮೇಲ್ದರ್ಜೆಗೇರಿಸಲು 45 ಕೋಟಿ ರೂಪಾಯಿ ಮೀಸಲಿಡಲಾಗುವುದು ಎಂದು ಘೋಷಿಸಿದರು.

ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಪೌಷ್ಟಿಕ ಪುನಶ್ಚೇತನ ಕೇಂದ್ರ ತೆರೆಯಲಾಗುವುದು. 18 ವರ್ಷದವರೆಗಿನ ಮಧುಮೇಹ ರೋಗಿಗಳಿಗೆ ಉಚಿತ ಇನ್ಸುಲಿನ್ ಪೆನ್ ನೀಡಲಾಗುವುದು. ಮಾರಣಾಂತಿಕ ಕಾಯಿಲೆ ರೋಗಿಗಳಿಗೆ ಕೇರಳ ಮಾದರಿ ಗೃಹಾಧಾರಿತ ಆರೈಕೆ ಒದಗಿಸಲಾಗುವುದು. ಇಸ್ಕಾನ್ ಮೂಲಕ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಆಹಾರ ಪೂರೈಕೆ ಮಾಡಲಾಗುವುದು.

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳ ಶೀಘ್ರ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular