ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಗರಿಗೆದರಿವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮಿಸಿದ್ದಾರೆ. ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಖರ್ಗೆ ಚರ್ಚಿಸಲಿದ್ದಾರೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಭೇಟಿಗೆ ಸಮಯ ನಿಗದಿಯಾಗಿದೆ.
ಇಂದು ರಾತ್ರಿ 8 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಗೆ ಸಮಯ ನಿಗದಿಯಾಗಿದೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಖರ್ಗೆ ನಿವಾಸದಲ್ಲಿಯೇ ಭೇಟಿಯಾಗುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಸೂಚಿಸಲಾಗಿದೆ.
ಸಿಎಂ ಹಾಗೂ ಖರ್ಗೆ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ನಾಯಕತ್ವ ಬದಲಾವಣೆ, ಸಂಪುಟ ಪುನರಾಚನೆ ವಿಚಾರವಾಗಿ ಮಲ್ಲಿಕಾರ್ಜುನ ಖರ್ಗೆ ಯಾವ ಸೂಚನೆ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
