HomeKarnatakaBREAKING: ಸೋನಿಯಾ ಗಾಂಧಿ ಭೇಟಿ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸಿದ್ದರಾಮಯ್ಯ: ಪುತ್ರ ಯತೀಂದ್ರನಿಗೆ ಸಚಿವ...

BREAKING: ಸೋನಿಯಾ ಗಾಂಧಿ ಭೇಟಿ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸಿದ್ದರಾಮಯ್ಯ: ಪುತ್ರ ಯತೀಂದ್ರನಿಗೆ ಸಚಿವ ಸ್ಥಾನಕ್ಕೆ ಬೇಡಿಕೆ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಬೆನ್ನಲ್ಲೇ ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತಿದ್ದಾರೆ. ನೂತನ ಸಚಿವ ಸಂಪುಟದಲ್ಲಿ ತನ್ನ ಪುತ್ರನಿಗೆ ಸ್ಥಾನ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.

ದೆಹಲಿಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ ಬಳಿಕ, ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊತ್ಟಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು. ಇದೇ ವೇಳೆ ಹೈಕಮಾಂಡ್ ಸೂಚನೆ ನೀಡುತ್ತಿದ್ದಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ನೂತನ ಸಂಪುಟದಲ್ಲಿ ಪುತ್ರ ಯತೀಂದ್ರನಿಗೆ ಸ್ಥಾನ ನೀಡಬೇಕು ಎಂದು ಸಿದ್ದರಾಮಯ್ಯ ಮಲ್ಲಿಕಾರ್ಜುನ ಖರ್ಗೆ ಬಳಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ ಹಾಗೂ ಯತೀಂದ್ರ ಸಿದ್ದರಾಮಯ್ಯ ಕೂಡ ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular