ಬೆಂಗಳೂರು: ರಾಜ್ಯದಲ್ಲಿ ಕುರ್ಚಿ ಕಿತ್ತಾಟದ ನಡುವೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್, ಕೆ.ಸಿ.ವೇಣುಗೋಪಾಲ್ ಜೊತೆ ಲಂಚ್ ಮೀಟಿಂಗ್ ಮೂಲಕ ಒಗ್ಗಟ್ಟಿನ ಮಂತ್ರ ಪಠಸಿದ್ದಾಯ್ತು. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರ ಪ್ರತ್ಯೇಕ ಸಭೆ ಕರೆದಿದ್ದಾರೆ.
ಬ್ರೇಕ್ ಫಾಸ್ಟ್ ಮೀಟಿಂಗ್, ಲಂಚ್ ಮೀಟಿಂಗ್ ಬಳಿಕ ಈಗ ಸಿಎಂ ಸಿದ್ದರಾಮಯ್ಯ ಕರೆದಿರುವ ಸಚಿವರ ಪ್ರತ್ಯೇಕ ಸಭೆ ತೀವ್ರ ಕುತೂಹಲ ಮೂಡಿಸಿದೆ. ಇಂದು ಸಂಜೆ ನಾಲ್ಕು ಗಂಟೆಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರುಗಳ ಸಭೆ ಕರೆದಿದ್ದಾರೆ.
ಡಿಸೆಂಬರ್ ೮ರಿಂದ ಬೆಳಗಾವಿ ಅಧಿವೇಶನ ಆರಂಭವಾಗುತ್ತಿದು, ಅಧಿವೇಶನದಲ್ಲಿ ವಿಪಕ್ಷಗಳನ್ನು ಯಾವ ರೀತಿ ಎದುರಿಸಬೇಕು ಎಂಬ ಬಗ್ಗೆ ಸಿದ್ಧತೆ, ಕಾರ್ಯತಂತ್ರ, ಅಧಿಕಾರ ಹಂಚಿಕೆ ಕಿತ್ತಾಟ ಮತ್ತಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
