ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಖಾಸಗಿ ದೂರು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ವಿರುದ್ಧ ಮುಡಾ ಸೈಟ್ ಹಂಚಿಕೆ ಆರೋಪ ಪ್ರಕರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಮಾಡಿರುವುದನ್ನು ಆಕ್ಷೇಪಿಸಿ ಸ್ನೇಹಮಯಿ ಕೃಷ್ಣ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಇಂದು ವಿಚಾರಣೆ ನಡೆಯಿತು.
ಬಿ ರಿಪೋರ್ಟ್ ಸಂಬಂಧ ಜನವರಿ 22 ರಂದು ಆದೇಶ ನೀಡುವುದಾಗಿ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಪತ್ನಿ ವಿರುದ್ಧ ಯಾವುದೇ ಸಾಕ್ಷ್ಯಗಳು ಕಂಡುಬಂದಿಲ್ಲ. 70 ಸಾಕ್ಷ್ಯಗಳಲ್ಲಿ ಯಾರೂ ಪ್ರಭಾವ ಬೀರಿರುವುದಾಗಿ ಹೇಳಿಲ್ಲ. ಎಲ್ಲಾ ಅಂಶಗಳನ್ನು ಪರಿಗಣಿಸಿ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಬಿ ರಿಪೋರ್ಟ್ ತಿರಸ್ಕರಿಸಬಹುದಾದ ಲೋಪಗಳಿಲ್ಲ ಎಂದು ಲೋಕಾಯುಕ್ತ ಎಸ್ ಪಿಪಿ ವೆಂಕಟೇಶ್ ಅರಬಟ್ಟಿ ವಾದ ಮಂಡಿಸಿದರು.
ವಾದ-ಪ್ರತಿವಾದ ಆಲಿಸಿದ ನ್ಯಾ.ಸಂತೋಷ್ ಗಜಾನನ ಭಟ್, ಅರ್ಜಿ ಕುರಿತ ಆದೇಶವನ್ನು ಜನವರಿ 22ಕ್ಕೆ ಕಾಯ್ದಿಸಿಸಿ ಆದೇಶ ಹೊರಡಿಸಿದರು.

