HomeLatest Newsಇನ್ಮುಂದೆ ಮೈಲಾರಿ ದೋಸೆಗಾಗಿ ಮೈಸೂರಿಗೆ ಹೋಗಬೇಕಿಲ್ಲ: ಬೆಂಗಳೂರಿನಲ್ಲಿ ಒರಿಜಿನಲ್‌ ಮೈಲಾರಿ ಹೋಟೆಲ್‌ ಉದ್ಘಾಟಿಸಿ ದೋಸೆ ಸವಿದ...

ಇನ್ಮುಂದೆ ಮೈಲಾರಿ ದೋಸೆಗಾಗಿ ಮೈಸೂರಿಗೆ ಹೋಗಬೇಕಿಲ್ಲ: ಬೆಂಗಳೂರಿನಲ್ಲಿ ಒರಿಜಿನಲ್‌ ಮೈಲಾರಿ ಹೋಟೆಲ್‌ ಉದ್ಘಾಟಿಸಿ ದೋಸೆ ಸವಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇನ್ಮುಂದೆ ಮೈಲಾರಿ ದೋಸೆ ಸವಿಯಲು ಮೈಸೂರಿನವರೆಗೂ ಹೋಗಬೇಕಾಗಿಲ್ಲ. ರಾಜ್ಯ ರಾಜಧಾನಿ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೇ ಮೈಲಾರಿ ದೋಸೆ ಸವಿಯಬಹುದು. ಮೈಸೂರಿನ ಪ್ರಸಿದ್ಧ ‘ಒರಿಜಿನಲ್ ವಿನಾಯಕ ಮೈಲಾರಿ-1938’ ಹೋಟೆಲ್‌ನ ಬೆಂಗಳೂರು ಶಾಖೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.

ಬೆಂಗಳೂರಿನ ಇಂದಿರಾನಗರದ 80 ಅಡಿ ರಸ್ತೆಯಲ್ಲಿ ನಡೆದ ಸಮಾರಂಭದಲ್ಲಿ ಹೋಟೆಲ್ ಉದ್ಘಾಟಿಸಿದ ಬಳಿಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಖುದ್ದು ಹೋಟೆಲ್ ನಲ್ಲಿ ಕುಳಿತು ಬೆಣ್ಣೆ ಖಾಲಿ ದೋಸೆ ಮತ್ತು ಕಾಶಿ ಹಲ್ವಾವನ್ನು ಸವಿದರು. ದೋಸೆಯ ರುಚಿಗೆ ತಲೆದೂಗಿದ ಸಿಎಂ ಸಿದ್ದರಾಮಯ್ಯ, ’ನಾನು ಮೈಸೂರಿನಲ್ಲಿ ಅನೇಕ ಬಾರಿ ಈ ದೋಸೆ ಸವಿದಿದ್ದೇನೆ. ಈಗ ಬೆಂಗಳೂರಿನಲ್ಲೂ ಅದೇ ಅಪ್ಪಟ ರುಚಿ ಸಿಗುತ್ತಿದೆ. ಆಹಾರ ಪ್ರಿಯರು ಇನ್ನುಮುಂದೆ ಮೈಲಾರಿ ದೋಸೆಗಾಗಿ ಮೈಸೂರಿಗೆ ಹೋಗುವ ಅಗತ್ಯವಿಲ್ಲ, ಅದು ಈಗ ನಮ್ಮ ಇಂದಿರಾನಗರದಲ್ಲೇ ಸಿಗುತ್ತಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

87 ವರ್ಷಗಳ ಇತಿಹಾಸವಿರುವ ಮೈಲಾರಿ ಪರಂಪರೆ ಬೆಂಗಳೂರಿಗೆ ಕಾಲಿಟ್ಟಿರುವುದಕ್ಕೆ ಶುಭ ಹಾರೈಸಿದರು. 1938ರಲ್ಲಿ ಗೌರಮ್ಮನವರು ಮೈಸೂರಿನ ನಜರ್‌ಬಾದ್‌ನಲ್ಲಿ ಆರಂಭಿಸಿದ್ದ ಮೈಲಾರಿ ದೋಸೆಯ ರುಚಿಯ ಪರಂಪರೆಯನ್ನು, ಇದೀಗ ನಾಲ್ಕನೇ ತಲೆಮಾರಿನ ಸಚಿನ್ ಮತ್ತು ಸಿಂಧು ದಂಪತಿ ಬೆಂಗಳೂರಿಗೆ ವಿಸ್ತರಿಸಿದ್ದಾರೆ. ಬಾಳೆ ಎಲೆ ಊಟ ಮತ್ತು ಹಳ್ಳಿ ಸೊಗಡಿನ ದೇಸಿ ರುಚಿಯನ್ನು ಉಳಿಸಿಕೊಂಡು ಹೋಗುವುದು ತಮ್ಮ ಗುರಿ ಎಂದು ಹೋಟೆಲ್ ಮಾಲೀಕರು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಾ. ರಾಜ್‌ಕುಮಾರ್‌ರಿಂದ ಹಿಡಿದು ಸಚಿನ್ ತೆಂಡೂಲ್ಕರ್‌ವರೆಗೆ ಮತ್ತು ಬಿಬಿಸಿ ಪಟ್ಟಿಯಲ್ಲೂ ಸ್ಥಾನ ಪಡೆದಿದ್ದ ಈ ಹೋಟೆಲ್, ಇಂದಿನಿಂದ ಅಧಿಕೃತವಾಗಿ ಬೆಂಗಳೂರಿಗರ ಸೇವೆಗೆ ಲಭ್ಯವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular