HomeLatest News11 ದಿನಗಳಲ್ಲಿ 4 ಬಾರಿ ಪೆಟ್ರೋಲ್, ಡೀಸೆಲ್ ದರ ಏರಿಕೆ: ಇದೇನಾ ಪ್ರಧಾನಿ ಮೋದಿ ಅಚ್ಚೇ...

11 ದಿನಗಳಲ್ಲಿ 4 ಬಾರಿ ಪೆಟ್ರೋಲ್, ಡೀಸೆಲ್ ದರ ಏರಿಕೆ: ಇದೇನಾ ಪ್ರಧಾನಿ ಮೋದಿ ಅಚ್ಚೇ ದಿನ್? ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಪೆಟ್ರೋಲ್, ಡೀಸೆಲ್ ದರವನ್ನು ಏರಿಸುವ ಮೂಲಕ ಕೇಂದ್ರ ಸರ್ಕಾರ ಮತ್ತೊಮ್ಮೆ ವಾಹನ ಸವಾರರಿಗೆ ಬಿಗ್ ಶಾಕ್ ನೀಡಿದೆ. ತೈಲ ಬೆಲೆ ಏರಿಕೆ ಶಾಕ್ ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ದರಗಳು ಸತತ ನಾಲ್ಕನೇ ಬಾರಿಗೆ ಹೆಚ್ಚಳವಾಗಿದ್ದು, ಪ್ರತಿ ಲೀಟರ್ ಪೆಟ್ರೋಲ್ ದರ 2.61 ರೂ. ಏರಿಕೆಯಾಗಿದೆ. ಡೀಸೆಲ್ ದರ 2.71 ರೂ. ಹೆಚ್ಚಳವಾಗಿದೆ.

ಈ ಬೆಲೆ ಏರಿಕೆಯ ನಂತರ ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ದರ 110.93 ರೂ. ಹಾಗೂ ಡೀಸೆಲ್ ದರ 98.54 ರೂ. ಆಗಿದೆ. ದಿನದಿಂದ ದಿನಕ್ಕೆ ತೈಲ ಬೆಲೆ ಏರಿಕೆಯಾಗುತ್ತಿರುವುದನ್ನು ಖಂಡಿಸಿರುವ ಕಾಂಗ್ರೆಸ್ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರುನಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ ಮಾಡಿದೆ. ಕರ್ನಾಟಕದ ಇತಿಹಾಸದಲ್ಲಿಯೇ ಈ ಪ್ರಮಾಣದಲ್ಲಿ ಹಿಂದೆಂಡೂ ಪೆಟ್ರೋಲ್, ಡಿಸೆಲ್ ದರ ಏರಿಕೆಯಾಗಿರಲಿಲ್ಲ. ಕಳೆದ 11 ದಿನಗಳಲ್ಲಿ 4ನೇ ಬಾಅರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. ಇದರಿಂದಾಗಿ ಜನ ಸಾಮಾನ್ಯರ ಬದುಕು, ಮಧ್ಯಮ ವರ್ಗದ ಜನರ ಬದುಕು ದುಸ್ಥರವಾಗಿದೆ ಎಂದು ಕಿಡಿಕಾರಿದರು.

ನರೇಂದ್ರ ಮೋದಿ ಅವರು ಹಾಗೂ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಅಚ್ಚೇ ದಿನ್ ಬರುತ್ತೆ ಎಂದು ಬಿಜೆಪಿಯವರು ಈ ದೇಶದ ಜನರಿಗೆ ಟೋಪೊ ಹಾಕುವ ಕೆಲಸಮಾಡಿದರು. ಗುಜರಾತ್ ಮಾಅದರಿ ಸರ್ಕಾರವನ್ನು ಕೇಂದ್ರದಲ್ಲಿ ತರುತ್ತೇವೆ. ಒಳ್ಳೆಯ ದಿನ ಬರುತ್ತೆ ಎಂದು ಅನೇಕ ಭರವಸೆ ಕೊಟ್ಟರು. ಆದರೆ ಈಗ ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಏರಿಸಲಾಗುತ್ತಿದೆ. ಇದೇನಾ ಮೋದಿ ಅವರ ಅಚ್ಚೇ ದಿನ್? ಎಂದು ಪ್ರಶ್ನಿಸಿದರು.

ಈ ಹಿಂದೆ ಯುಪಿಎ ಸರ್ಕಾರದಲ್ಲಿ ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಪೆಟ್ರೋಲ್, ಡೀಸೆಲ್ ದರ ಎಷ್ಟಿತ್ತು? ಕೊಂಚ ದರ ಏರಿಸಿದರೂ ಬಿಜೆಪಿ ನಾಯಕರು ಹಾಗೂ ಅಂದು ಗುಜರಾತ್ ಸಿಎಂ ಆಗಿದ್ದಾಗ ಏನೆಲ್ಲ ಮಾತನಾಡಿದರು ಎಂಬುದು ದೇಶದ ಜನತೆಗೆ ಗೊತ್ತಿದೆ. ಕಳೆದ 11 ದಿನಗಳಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. ಅಗತ್ಯ ವಸ್ತುಗಳ ಬೆಲೆಯೂ ಏರುತ್ತಿದೆ ಈ ಬಗ್ಗೆ ಕೇಂದ್ರ ಸರ್ಕಾರ ಗಮನಹರಿಸಬೇಕು ಎಂದು ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಲೀಟರ್ .ಪೆಟ್ರೋಲ್ ಬೆಲೆ 110.93 ಪೈ. ಡೀಸೆಲ್ 98.54 ಪೈಸೆ ಆಗಿದೆ. ಈ ಹಿಂದೆ ಎಂದೂ ಈ ಮಟ್ಟದಲ್ಲಿ ಪೆಟ್ರೋಲ್ ದರ ಏರಿಕೆಯಾಗಿರಲಿಲ್ಲ. ಡೀಸೆಲ್ ದರ ಮುಂದಿನ ದಿಬಗಳಲ್ಲಿ ನೂರು ರೂಪಾಯಿ ದಾಅಟಿದರೂ ಅಚ್ಚರಿ ಇಲ್ಲ ಎಂದು ಹೇಳಿದರು.

ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದರ ಏರಿಕೆ ಮೂಲಕ ಹೇಗೆಲ್ಲ ಈ ದೇಶವನ್ನು ಲೂಟಿ ಮಾಡುತ್ತಿದ್ದಾರೆ ಎಂಬುದನ್ನು ಜನರು ಅರ್ಥೈಸಿಕೊಳ್ಳಬೇಕು ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular