ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿಯವರನ್ನು ಭೇಟಿಯಾಗಿ 5 ವಿಷಯಗಳನ್ನು ಚರ್ಚಿಸಿದ್ದೇವೆ ಎಂದು ಹೇಳಿದರು.
ರಾಜ್ಯದಲ್ಲಿ ಬೆಳೆಹಾನಿ, ರೈತರ ಸಂಕಷ್ಟ ಸೇರಿದಂತೆ ಐದು ವಿಷಯಗಳ ಬಗ್ಗೆ ಪ್ರಧಾನಿ ಜೊತೆ ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ ಒಟ್ಟು 14,58,000 ಹೆಕ್ಟೇರ್ ಬೆಳೆ ಹಾನಿಯಾಗಿದೆ. ಬೆಳೆಹಾನಿ ಬಗ್ಗೆ ನಾವು ಜಂಟಿ ಸಮೀಕ್ಷೆ ನಡೆಸಿದ್ದೇವೆ. ರಾಜ್ಯದಲ್ಲಿ 3560 ಕೋಟಿ ನಷ್ಟವಗಿದೆ. ಮಳೆಯಿಂದಾಗಿ ಮೂಲಸೌಕರ್ಯಗಳಿಗೂ ಹಾನಿಯಾಗಿದೆ ಎಂದು ಪ್ರಧಾನಿಯವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದರು.
ರಾಜ್ಯ ಸರ್ಕಾರವೂ ಬೆಳೆಹಾನಿ ಪರಿಹಾರ ಕೊಡುತ್ತಿದೆ. ರೈತರಿಗೆ ಕೊಡಬೇಕಾದ ಪರಿಹಾರ 2,800 ಕೋಟಿಯಾಗುತ್ತದೆ ಎಂದು ತಿಳಿಸಿದ್ದೇವೆ ಎಂದರು.
