ಬೆಂಗಳೂರು: ರಾಜ್ಯದಲ್ಲಿ ಕಬ್ಬು ಬೆಳೆಗಾರ ರೈತರ ಪ್ರತಿಭಟನೆ ತೀವ್ರಗೊಂಡಿದ್ದು, ಟನ್ ಕಬ್ಬಿಗೆ 3500 ರೂಪಾಯಿ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾತ ತೀವ್ರ ಸ್ವರೂಪ ಪಡೆದುಕೊಂಡಿದೆ.
ಬೆಳಗಾವಿ, ಬಾಗಲಕೋಟೆ, ಬೀದರ್ ಸೇರಿದಂತೆ ಹಲವೆಡೆ ಕಬ್ಬು ಬೆಳೆಗಾರರು ಅಹೋರಾತ್ರಿ ಧರಣಿ ನಡೆಸುತ್ತಿದ್ದು, ರೈತರ ಆಕ್ರೋಶ ಭುಗಿಲೇಳುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಳೆ ಬೆಳಿಗ್ಗೆ 11 ಗಂಟೆಗೆ ರಾಜ್ಯದ ಎಲ್ಲಾ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಭೆ ನಡೆಸಲಾಗುವುದು. ಸಭೆಯಲ್ಲಿ ಎಫ್ ಆರ್ ಪಿ ಬಗ್ಗೆಯೂ ಚರ್ಚಿಸಲಾಗುವುದು. ಕಬ್ಬು ಬೆಳೆಗಾರರಿಗೆ ಪಾವತಿಸುತ್ತಿರುವ ಹಣದ ಬಗ್ಗೆಯೂ ಸಮಾಲೋಚನೆ ನಡೆಸಲಾಗುವುದು ಎಂದು ಹೇಳಿದರು.
