HomeLatest NewsBREAKING: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ: ಭದ್ರತಾ ವೈಫಲ್ಯ ಶಂಕೆ

BREAKING: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ: ಭದ್ರತಾ ವೈಫಲ್ಯ ಶಂಕೆ

ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲವುಂಟಾಗಿದ್ದು, ಸಿಎಂ ಇಳಿಯಬೇಕಿದ್ದ ಹೆಲಿಪ್ಯಾಡ್ ಬದಲಾಗಿ ಸಚಿವ ಸತೀಶ್ ಜಾರಕಿಹೊಳಿ ಇಳಿಯಬೇಲಿದ್ದ ಹೆಲಿಪ್ಯಾಡ್ ನಲ್ಲಿ ಸಿಎಂ ಹೆಲಿಪಾಕ್ಟರ್ ಲ್ಯಾಂಡಿಗ್ ಆಗಿರುವ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಕಲಬುರಗಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ರಾಯಚೂರು ರಸ್ತೆಯಲ್ಲಿ ಲ್ಯಾಂಡ್ ಆಗಬೇಕಿದ್ದ ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್, ಕಲಬುರಗಿ ರಸ್ತೆಯಲ್ಲಿ ಲ್ಯಾಂಡ್ ಆಗಿದೆ.

ಸಚಿವ ಸತೀಶ್ ಜಾರಕಿಹೊಳಿ ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗಬೇಕಿದ್ದ ಸ್ಥಳದಲ್ಲಿ ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡ್ ಆಗಿದೆ. ಅಲ್ಲದೇ ಸಚಿವ ಸತೀಶ್ ಜಾರಕಿಹೊಳಿ, ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡ್ ಆಗಬೇಕಿದ್ದ ಹೆಲಿಪ್ಯಾಡ್ ನಲ್ಲಿ ಇಳಿದಿದ್ದಾರೆ. ಇದು ಗೊಂದಲಕ್ಕೆ ಕಾರಣವಾಗಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರನ್ನು ರಿಸೀವ್ ಮಾಡಿಕೊಳ್ಳಲು ಓಬ್ಬನೇ ಒಬ್ಬ ಅಧಿಕಾರಿ ಮಾತ್ರ ಇದ್ದರು ಎಂದು ತಿಳಿದುಬಂದಿದೆ. ಸಿಎಂ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ವೈಫಲ್ಯವಾಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಅಧಿಕಾರಿಗಳು ಈ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular