HomeLatest NewsBREAKING: ಬದಲಾವಣೆ ಬಗ್ಗೆ ಪದೇ ಪದೇ ಪ್ರಶ್ನೆ ಕೇಳಬೇಡಿ: ಗರಂ ಆದ ಸಿಎಂ ಸಿದ್ದರಾಮಯ್ಯ

BREAKING: ಬದಲಾವಣೆ ಬಗ್ಗೆ ಪದೇ ಪದೇ ಪ್ರಶ್ನೆ ಕೇಳಬೇಡಿ: ಗರಂ ಆದ ಸಿಎಂ ಸಿದ್ದರಾಮಯ್ಯ

ಹಾವೇರಿ: ರಾಜ್ಯ ಕಾಂಗ್ರೆಸ್ ನಲ್ಲಿ ಶಾಸಕರು ಅಧಿಕಾರ ಹಸ್ತಾಂತರ ವಿಚಾರವಾಗಿ ದಿನಕ್ಕೊಂದು ಹೇಳಿಕೆಗಳನ್ನು ಕೊಡುತ್ತಿರುವ ಬಗ್ಗೆ ಸುದ್ದಿಗಾರರು ಪ್ರಶ್ನಿಸುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆದ ಘಟನೆ ನಡೆದಿದೆ.

ಹಾವೇರಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬದಲಾವಣೆ ಬಗ್ಗೆ ಪದೇ ಪದೇ ಪ್ರಶ್ನೆ ಕೇಳಬೇಡಿ. ಈಗಾಗಲೇ ಸಾಕಷ್ಟು ಬಾರಿ ಹೇಳಿದ್ದೇನೆ. ಮತ್ಯಾಕೆ ಪ್ರಶ್ನೆ ಕೇಳುತ್ತಿದ್ದೀರಿ? ಎಂದು ಅಸಮಾಧಾನ ಹೊರಹಾಕಿದರು.

ಹೈಕಮಾಂಡ್ ಏನು ಹೇಳುತ್ತದೆ ಅದರಂತೆ ನಡೆದುಕೊಳ್ಳುತ್ತೇನೆ. ಹೈಕಮಾಂಡ್ ನಿರ್ಧಾರವೇ ಅಂತಿಮ. ಹೈಕಮಾಂಡ್ ಹೇಳಿದಂತೆ ನಡೆಯುತ್ತೇನೆ ಎಂದು ಹೇಳಿದರು. ಈ ಬಗ್ಗೆ ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಹೈಕಮಾಂಡ್ ಈ ಬಗ್ಗೆ ಕೇಳಿದ್ದಾರಾ? ಹಾಗಂದಮೇಲೆ ಪದೇ ಪದೇ ಯಾಕೆ ಇದೇ ಪ್ರಶ್ನೆ ಕೇಳುತ್ತಿದ್ದೀರಿ? ಎಂದು ಗರಂ ಆದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಸ್ತಾಂತರ ವಿಚಾರ, ಡಿಸಿಎಂ ದೆಹಲಿ ಪ್ರವಾಸದ ಬಗ್ಗೆ ಕಾಂಗ್ರೆಸ್ ಶಾಸಕರೇ ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಿದ್ದು, ರಾಜ್ಯ ಕಾಂಗ್ರೆಸ್ ನಾಯಕರಿಗೆ ಇರಿಸುಮುರಿಸು ಉಂಟು ಮಾಡುತ್ತಿದೆ. ಈ ನಡುವೆಯೇ ಅಧಿಕಾರ ಹಸ್ತಾಂತರದ ಬಗ್ಗೆ ಪ್ರಶ್ನಿಸುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಕೂಡ ಗರಂ ಆಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular