BIG NEWS: ಹೆಸರು ಹೇಳಿಲ್ಲ, ನಾನು ಅದಕ್ಕೆ ಪ್ರತಿಕ್ರಿಯಿಸಲ್ಲ ಎಂದ ಸಿಎಂ ಸಿದ್ದರಾಮಯ್ಯ

ಧಾರವಾಡ: ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಪರೋಕ್ಷ ವಾಗ್ದಾಳಿ ವಿಚಾರವಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅವರು ನನ್ನ ಹೆಸರು ಹೇಳಿಲ್ಲ, ಅದಕ್ಕೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ತಿಳಿಸಿದ್ದಾರೆ.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹರಿಪ್ರಸಾದ್ ನನ್ನ ಹೆಸರು ಹೇಳಿದ್ದಾರಾ? ಹೆಸರು ಹೇಳಿಲ್ಲ, ಅದಕ್ಕೆ ನಾನು ಪ್ರತಿಕ್ರಿಯಿಸಲ್ಲ. ಜನರಲ್ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ಕೊಡಲ್ಲ ಎಂದು ಹೇಳಿದರು.

ಬೆಂಗಳೂರಿನಲ್ಲಿ ನಡೆದ ಸಮಾನ ಮನಸ್ಕರರ ಸಭೆಯಲ್ಲಿ ಮಾತನಾಡಿದ ಬಿ.ಕೆ.ಹರಿಪ್ರಸಾದ್, ನನ್ನನ್ನು ಮಂತ್ರಿ ಮಾಡದಿದ್ದಕ್ಕೆ ಸಿಎಂ ಸಿದ್ದಮಯ್ಯನವರಿಗೆ ಧನ್ಯವಾದ. ದೇವರಾಜ್ ಅರಸು ಕಾರಿನಲ್ಲಿ ಕುಳಿತರೆ ಸಾಲದು, ಅವರ ಚಿಂತನೆಯೂ ಇರಬೇಕು. ಹಿಂದಿನ ಮುಖ್ಯಮಂತ್ರಿಗಳು ಜಾತಿ ರಾಜಕಾರಣ ಮಾಡುತ್ತಿರಲಿಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಜಾತಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read