BIG NEWS: ಬೆಳಗಾವಿ ಅಧಿವೇಶನ: ವಿಪಕ್ಷಗಳ ಪ್ರಶ್ನೆಗೆ ಉತ್ತರಿಸಲು ಸರ್ಕಾರ ಸಿದ್ದ ಎಂದ ಸಿಎಂ ಸಿದ್ದರಾಮಯ್ಯ

ಹಾವೇರಿ: ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಸಿಎಂ ಸಿದ್ದರಾಮಯ್ಯ, ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಭಾಗದ ಸಮಸ್ಯೆಗಳ ಚರ್ಚೆಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದರು.

ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ, ಅಧ್ಯಕ್ಷರ ನೇಮಕಾತಿಗೆ ಮೊದಲ ಹಂತದಲ್ಲಿ ಶಾಸಕರನ್ನು ಪರಿಗಣಿಸಲಾಗುವುದು. ನಾನು ಹಾಗೂ ಉಪಮುಖ್ಯಮಂತ್ರಿಗಳು ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ ಪಕ್ಷದ ವರಿಷ್ಠರಿಗೆ ನೀಡಿದ್ದೇವೆ ಎಂದರು.

ಇನ್ನು ಬರಪರಿಹಾರದ ವಿಚಾರವಾಗಿ ಬೆಳೆಹಾನಿ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ನಿಗದಿಯಾಗಿರುವ ಪರಿಹಾರ ಮೊತ್ತವನ್ನು ನೀಡಲಾಗುವುದು. ಜಿಲ್ಲಾಉಸ್ತುವಾರಿ ಸಚಿವರುಗಳು, ಜಿಲ್ಲಾಧಿಕಾರಿಗಳಿಗೆ ಬರಗಾಲದ ಪರಿಸ್ಥಿತಿಯ ಬಗ್ಗೆ ನಿಗಾ ವಹಿಸಬೇಕು. ಕುಡಿಯುವ ನೀರಿಗೆ ಕೊರತೆ ಬರದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಎನ್ ಆರ್ ಜಿ ಎಸ್ ಅಡಿ ಬರಗಾಲದ ಪರಿಸ್ಥಿತಿಯಲ್ಲಿ 150 ಮಾನವದಿನಗಳ ಉದ್ಯೋಗ ನೀಡುವ ಕೇಂದ್ರದ ನಿಯಮವಿದೆ. ಈ ಕ್ರಮಕ್ಕೆ ಕೇಂದ್ರ ಸರ್ಕಾರದವರು ಅನುಮತಿ ನೀಡಬೇಕಿದ್ದು, ಇದುವೆರಗೆ ಈ ಅನುಮತಿಯನ್ನು ನೀಡಿಲ್ಲ. ಇಡೀ ದೇಶದಲ್ಲಿ 12 ರಾಜ್ಯಗಳಲ್ಲಿ ಬರಗಾಲ ಪರಿಸ್ಥಿತಿಯಿದೆ. ರಾಜ್ಯಕ್ಕೆ ಬರ ಅಧ್ಯಯನಕ್ಕಾಗಿ ಕೇಂದ್ರ ತಂಡ ಬಂದು ಪರಿಶೀಲಿಸಿ ಹೋಗಿದೆ. ಆದರೂ ಕೇಂದ್ರದಿಂದ ಬರಪರಿಹಾರ ಬಿಡುಗಡೆಯಾಗಿಲ್ಲ. ರಾಜ್ಯದ ದುಡ್ಡನ್ನು ರಾಜ್ಯಕ್ಕೆ ಬಿಡುಗಡೆ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read