HomeKarnatakaBIG NEWS: ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

BIG NEWS: ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ದೇಶದ ಸಂಪತ್ತನ್ನು ಮುಸ್ಲಿಂರಿಗೆ ಹಂಚುತ್ತೇನೆ. ಮುಸ್ಲಿಂರನ್ನು ನಾನು ರಕ್ಷಣೆ ಮಾಡುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ವಿವಾದವಾಗುತ್ತಿದ್ದಂತೆ ಇದೀಗ ಸಿಎಂ ಸಿದ್ದರಾಮಯ್ಯ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

ಬೆಳಗಾವಿ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅದರಲ್ಲಿ ತಪ್ಪೇನಿದೆ? ಮುಸ್ಲಿಂರು ಸೇರಿ ಎಲ್ಲರನ್ನೂ ರಕ್ಷಣೆ ಮಾಡುತ್ತೇವೆ ಎಂದು ನಾನು ಹೇಳಿದ್ದು. ಬೇರೆ ರೀತಿ ಅರ್ಥ ಕಲ್ಪಿಸಿಕೊಂಡು ಹೇಳಿದರೆ ಏನು ಮಾಡುವುದು ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾನು ಹೇಳಿದ್ದನ್ನು ಒಂದು ಪತ್ರಿಕೆ ಮಾತ್ರ ಸರಿಯಾಗಿ ಬರೆದಿದೆ. ನನ್ನ ಹೇಳಿಕೆಯನ್ನು ಬೇರೆ ಅರ್ಥ ಕಲ್ಪಿಸಿಕೊಂಡು ರಾಜಕೀಯ ಮಾಡಿದರೆ ಏನು ಮಾಡುವುದು? ಎಲ್ಲಾ ಸಮುದಾಯದವರನ್ನೂ ರಕ್ಷಣೆ ಮಾಡುತ್ತೇವೆ ಎಂದು ನಾನು ಹೇಳಿದ್ದು ಎಂದು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular