HomeLive Newsಗೋಧ್ರಾ ಹತ್ಯಾಕಾಂಡ ನಡೆದಾಗ ಅಂದಿನ ಸಿಎಂ ರಾಜೀನಾಮೆ ಕೊಟ್ರಾ? ಕುಂಭಮೇಳದಲ್ಲಿ ಕಾಲ್ತುಳಿತವಾದಾಗ ಯುಪಿ ಸಿಎಂ ರಾಜೀನಾಮೆ...

ಗೋಧ್ರಾ ಹತ್ಯಾಕಾಂಡ ನಡೆದಾಗ ಅಂದಿನ ಸಿಎಂ ರಾಜೀನಾಮೆ ಕೊಟ್ರಾ? ಕುಂಭಮೇಳದಲ್ಲಿ ಕಾಲ್ತುಳಿತವಾದಾಗ ಯುಪಿ ಸಿಎಂ ರಾಜೀನಾಮೆ ಕೊಟ್ರಾ? ವಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಚಿಕ್ಕಬಳ್ಳಾಪುರ: ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಅಭ್ಯಾಸವಾಗಿದೆ. ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡೇ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಚಿಕ್ಕಬಳ್ಳಾಪುರದ ಗೌರಿಬಿದನೂರಿನ ಬೊಮ್ಮಸಂದ್ರ ಗ್ರಾಮ ಹೆಲಿಪ್ಯಾಡ್ ನಲ್ಲಿ ಮಾತನಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ವತಿಯಿಂದ ಮುಖ್ಯಮಂತ್ರಿಗಳ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕುಂಭ ಮೇಳದಲ್ಲಿ 40-50 ಜನ ಕಾಲ್ತುಳಿತದಲ್ಲಿ ಸತ್ತರು. ಆಗ ಅಲ್ಲಿನ ಮುಖ್ಯಮಂತ್ರಿಗಳ ರಾಜೀನಾಮೆ ಕೇಳಿದರೇ? ಸೇತುವೆಯೊಂದು ಉದ್ಘಾಟನೆಯಾದ ದಿನವೇ ಬಿದ್ದು 140 ಜನ ಸತ್ತರು ಆಗ ಪ್ರಧಾನಿಗಳ ರಾಜಿನಾಮೆ ಕೇಳಿದರೇ ? ಗೋಧ್ರಾ ಹತ್ಯಾಕಾಂಡದಲ್ಲಿ ಎಷ್ಟು ಜನ ಸತ್ತರು. ಆಗ ಗುಜರಾತ್ ಮುಖ್ಯಮಂತ್ರಿಗಳು ಯಾರಾಗಿದ್ದರು? ಅವರ ರಾಜಿನಾಮೆ ಕೇಳಿದರೇ? ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಸರಬರಾಜು ಮಾಡದೇ 23 ಜನ ಸತ್ತಾಗ ಬಸವರಾಜ ಬೊಮ್ಮಾಯಿ ರಾಜಿನಾಮೆ ನೀಡಿದರೆ ಎಂದು ಪ್ರಶ್ನಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿಯವರು ರಾಜಕೀಯವಾಗಿ ರಾಜಿನಾಮೆ ಕೊಡಿ ಎಂದು ಕೇಳುತ್ತಿದ್ದಾರೆ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದರು.

ಇಡಿಯವರು ದಾಳಿ ಮಾಡಿದ್ದು ಯಾವುದೇ ಕಾನೂನಿನ ಉಲ್ಲಂಘನೆಯಾಗಿದ್ದರೆ ಅದಕ್ಕೆ ನಾವು ಬೆಂಬಲಿಸುವುದಿಲ್ಲ. ಕಾನೂನು ಪ್ರಕಾರವಾಗಿ ಕ್ರಮ ಕೈಗೊಳ್ಳಲಿ. ಕಾನೂನಿನ ಅನುಷ್ಠಾನಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular