BIG NEWS: ಮಾಜಿ ಸಿಎಂ HDK ಟ್ವೀಟ್ ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?


ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರು ಅವರ ಸರ್ಕಾರದ ವ್ಯವಹಾರವನ್ನು ಈಗ ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿಯವರ ಸರಣಿ ಟ್ವೀಟ್ ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿಯವರುನೂರು ಬಾರಿ ಟ್ವೀಟ್ ಗಳನ್ನೂ ಮಾಡಿದರೂ, ಅವುಗಳಿಗೆ ಉತ್ತರಿಸುವ ಅವಶ್ಯಕತೆಯಿಲ್ಲ ಎಂದು ಹೇಳಿದರು.

ಕುಮಾರಸ್ವಾಮಿಯವರು ಅವರ ಸರ್ಕಾರದ ಅವಧಿಯಲ್ಲಿ ಮಾಡುತ್ತಿದ್ದ ವರ್ಗಾವಣೆ ಮತ್ತು ಹಣದ ವ್ಯವಹಾರವನ್ನು ಈಗ ಹೇಳುತ್ತಿದ್ದಾರೆ. ನಾನು ಈ ಮೊದಲೂ ಹೇಳಿದಂತೆ, ಹಣ ತೆಗೆದುಕೊಂಡು ವರ್ಗಾವಣೆ ಮಾಡಿಸಿದ್ದರೆ, ನನ್ನ ರಾಜಕೀಯ ಜೀವನದಿಂದ ನಿವೃತ್ತಿ ಹೊಂದುತ್ತೇನೆ ಎಂದರು.

ಇದೇ ವೇಳೆ ವಿಶ್ವಕಪ್ ಫೈನಲ್ ಪಂದ್ಯ ಹಿನ್ನೆಲೆಯಲ್ಲಿ ಭಾರತ ತಂಡಕ್ಕೆ ಶುಭ ಕೋರಿದ ಸಿಎಂ, ಭಾರತ ಹತ್ತು ಪಂದ್ಯಗಳನ್ನು ಸತತವಾಗಿ ಗೆಲ್ಲುವ ಮೂಲಕ ಉತ್ತಮ ಪ್ರದರ್ಶನವನ್ನು ನೀಡುತ್ತಿದೆ. ಈ ಬಾರಿಯೂ ಕ್ರಿಕೆಟ್ ವಿಶ್ವಕಪ್ ಭಾರತ ತಂಡಕ್ಕೆ ಲಭಿಸಲಿದೆ ಎಂಬ ವಿಶ್ವಾಸವಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read