ಬೆಂಗಳೂರು: ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಬಿಜೆಪಿ ಎಂಎಲ್ ಸಿ ರವಿಕುಮಾರ್ ಅವಹೇಳನಕಾರಿ ಹೇಳಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರವಿಕುಮಾರ್ ಅವರಿಗೆ ನಾಲಿಗೆ ಜಾಸ್ತಿಯಾಗಿದೆ. ಅವರಿಗೆ ನಾಲಿಗೆ ಉದ್ದವಾಗಿದೆ ಎಂದು ಕಿಡಿಕಾರಿದರು.
ಸಿಎಸ್ ಶಾಲಿನಿ ರಜನೀಶ್ ವಿರುದ್ಧ ಅಸವಿಂಧಾನಿಕ ಪದ ಬಳಕೆ ಮಾಡಿರುವ ಎಂಎಲ್ ಸಿ ರವಿಕುಮಾರ್ ವಿರುದ್ಧ ಈಗಾಗಲೇ ಎಫ್ ಐ ಆರ್ ದಾಖಲಾಗಿದೆ. ಈ ನಡುವೆ ರವಿಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಇಂದು ಮಧ್ಯಾಹ್ನ 2:30ರ ಬಳಿಕ ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.