HomeKarnatakaBIG NEWS: ಯತ್ನಾಳ್ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

BIG NEWS: ಯತ್ನಾಳ್ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಳಗಾವಿ: ಮೌಲ್ವಿ ತನ್ವೀರ್ ಹಾಶ್ಮಿಗೆ ಐಸಿಸ್ ಉಗ್ರರ ನಂಟಿದೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಾಸಕ ಯತ್ನಾಳ್ ಒಬ್ಬ ಮಹಾನ್ ಸುಳ್ಳುಗಾರ. ಮೌಲ್ವಿ ತನ್ವೀರ್ ಹಾಶ್ಮಿ ಜೊತೆ ಹಿಂದಿನಿಂದಲೂ ನನಗೆ ಪರಿಚಯವಿದೆ. ಕೇಂದ್ರದಲ್ಲಿ ಅವರದ್ದೇ ಸರ್ಕಾರವಿದೆ ತನಿಖೆ ನಡೆಸಲಿ ಎಂದು ಟಾಂಗ್ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದ್ವೇಷದ ರಾಜಕಾರಣ ಮಾಡೋದೇ ಯತ್ನಾಳ್ ಕೆಲಸ. ಯತ್ನಾಳ್ ವಿಪಕ್ಷ ಸ್ಥಾನಕ್ಕೆ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಪ್ರಯತ್ನಿಸಿದರು. ಆದರೆ ಅವರಿಗೆ ವಿಪಕ್ಷ, ರಾಜ್ಯಾಧ್ಯಕ್ಷ ಎರಡೂ ಸ್ಥಾನಗಳು ಕೈತಪ್ಪಿವೆ. ಹಾಗಾಗಿ ಹತಾಶೆಗೊಂಡು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular