HomeLatest NewsBIG NEWS: ಯಾವುದೇ ಸಂಘ-ಸಂಸ್ಥೆಗಳನ್ನು ಗುರಿಯಾಗಿಸಿ ಆದೇಶ ಹೊರಡಿಸಿಲ್ಲ; ಬಿಜೆಪಿ ಸರ್ಕಾರದ ಆದೇಶವನ್ನೇ ನಾವೂ ಹೊರಡಿಸಿದ್ದೇವೆ:...

BIG NEWS: ಯಾವುದೇ ಸಂಘ-ಸಂಸ್ಥೆಗಳನ್ನು ಗುರಿಯಾಗಿಸಿ ಆದೇಶ ಹೊರಡಿಸಿಲ್ಲ; ಬಿಜೆಪಿ ಸರ್ಕಾರದ ಆದೇಶವನ್ನೇ ನಾವೂ ಹೊರಡಿಸಿದ್ದೇವೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಯಾವುದೇ ಸಂಘ-ಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ ಯಾವುದೇ ಸಂಘ-ಸಂಸ್ಥೆಗಳನ್ನು ಗುರಿಯಾಗಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕುಂದಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನದ ಬಗ್ಗೆ ಗೊಂದಲ ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಹಿಂದೆ ಬಿಜೆಪಿಯ ಜಗದೀಶ್ ಶೆಟ್ಟರ್ ಅವರ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದಂತೆ , ನಮ್ಮ ಸರ್ಕಾರವೂ ಆದೇಶವನ್ನು ಹೊರಡಿಸಿದೆ. ಬಿಜೆಪಿ ಸರ್ಕಾರ ಹೊರಡಿಸಿದ್ದ ಈ ಆದೇಶಕ್ಕೆ ಯಾವುದೇ ವಿರೋಧ ವ್ಯಕ್ತವಾಗಿರಲಿಲ್ಲ. ಈ ಆದೇಶದಲ್ಲಿ ಸರ್ಕಾರ ಯಾವುದೇ ನಿಗಧಿತವಾದ ಸಂಘಸಂಸ್ಥೆಯನ್ನು ಗುರಿ ಮಾಡಿಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಜನರ ಹಿತಚಿಂತನೆ ಮಾಡುವುದನ್ನು ಬಿಟ್ಟು ರಾಜಕೀಯದಲ್ಲಿ ತೊಡಗಿದ್ದಾರೆ. ಈ ವಿಷಯದಲ್ಲಿ ಸಮಾಜದ ಶಾಂತಿಭಂಗವಾಗದಂತೆ ಪೊಲೀಸ್ ಇಲಾಖೆ ನೋಡಿಕೊಳ್ಳುತ್ತದೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular