ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಹರಿಸುವಂತೆ ಮಹಾರಾಷ್ಟ್ರ ಸಿಎಂ ಗೆ ‘ಸಿದ್ದರಾಮಯ್ಯ’ ಪತ್ರ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ತೀವ್ರ ನೀರಿನ ಸಮಸ್ಯೆ ಎದುರಾಗಿದೆ. ಈ ನಿಟ್ಟಿನಲ್ಲಿ ಉಜನಿ ಜಲಾಶಯದಿಂದ ಭೀಮಾ ನದಿಗೆ ಹಾಗೂ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ತೀವ್ರ ಬರ ಎದುರಿಸುತ್ತಿರುವ ಕಲಬುರಗಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ನಮ್ಮ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ.ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯ ಅಭಾವದಿಂದಾಗಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದು ಈಗಿರುವ ಪ್ರಮಾಣದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಲು ಆಗುವುದಿಲ್ಲ. ಹಾಗಾಗಿ, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 TMC ಹಾಗೂ ಉಜನಿ ಜಲಾಶಯದಿಂದ ಭೀಮಾ ನದಿಗೆ 1 TMC ನೀರು ಹರಿಸುವಂತೆ ಮುಖ್ಯಮಂತ್ರಿಗಳು ಮಾರ್ಚ್ 7 ರಂದು ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಸಿಎಂ ಬರೆದ ಪತ್ರಕ್ಕೆ ಸ್ಪಂದನೆ ಸಿಗದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮಹಾರಾಷ್ಟ್ರದ ಅಧಿಕಾರಿಗಳ ಮೇಲೆ ನಿರಂತರ ಒತ್ತಡ ತರಲಾಗುತ್ತಿದೆ. ಕಲಬುರಗಿ ಜಿಲ್ಲೆ ಹಾಗೂ ಈಗ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಅಫಜಲಪುರ ತಾಲೂಕಿನಲ್ಲಿನ ಸಮಸ್ಯೆ ಬಗೆಹರಿಸಲು ಭೀಮಾ ನದಿಗೆ ನೀರು ಹರಿಸಲು ಪ್ರಯತ್ನ ನಡೆದಿದೆ. ಈ ನಡುವೆ, ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯದಿಂದ ಸೋನ್ನ ಬ್ಯಾರೆಜಿಗೆ ನೀರು ತರುವ ಪ್ರಯತ್ನ ಕೂಡ ನಡೆದಿದೆ.

ಕುಡಿಯುವ ನೀರಿಗಾಗಿ ಹಣದ ಕೊರತೆ ಇಲ್ಲ ಪಿ.ಡಿ. ಖಾತೆಯಲ್ಲಿ ₹16 ಕೋಟಿ ಹಾಗೂ ಗ್ರಾಮೀಣ ಕುಡಿಯುವ ನೀರು ವಿಭಾಗದ ಖಾತೆಯಲ್ಲಿ ₹127 ಕೋಟಿ ಅನುದಾನ ಲಭ್ಯವಿದೆ. ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು NDRF ಅಡಿಯಲ್ಲಿ ಬಾಡಿಗೆ ಬೋರ್ ವೆಲ್ ಹಾಗೂ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ತೀವ್ರ ಬರ ಇರುವುದರಿಂದ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿ ತಯಾರಿಸಿ ತುರ್ತು ಕ್ರಮವಹಿಸಿ ಕುಡಿಯುವ ನೀರು ಒದಗಿಸುವ ಸಲುವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read