HomeLatest Newsಚುನಾವಣಾ ಆಯೋಗದ ಎಸ್ಐಆರ್ ಪ್ರಕ್ರಿಯೆ: ಮತದಾರರಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ: ಬಿಎಲ್ ಓ ಗಳಿಗೆ ಸಿಎಂ ಸೂಚನೆ

ಚುನಾವಣಾ ಆಯೋಗದ ಎಸ್ಐಆರ್ ಪ್ರಕ್ರಿಯೆ: ಮತದಾರರಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ: ಬಿಎಲ್ ಓ ಗಳಿಗೆ ಸಿಎಂ ಸೂಚನೆ

ಬೆಳಗಾವಿ: ಚುನಾವಣಾ ಆಯೋಗ ನಡೆಸುವ ಎಸ್ಐಆರ್ ವಿಚಾರದಲ್ಲಿ ಕಾಂಗ್ರೆಸ್ ಎಂದಿಗೂ ರಾಜಕೀಯ ಮಾಡುವುದಿಲ್ಲ. ಆದರೆ ನಿಜವಾದ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದು ಎಂಬುದಷ್ಟೇ ನಮ್ಮ ಕಾಳಜಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚುನಾವಣಾ ಆಯೋಗ ನಡೆಸುವ ಎಸ್ಐಆರ್ ಪ್ರಕ್ರಿಯೆಯಂತೆ ರಾಜ್ಯದ 3 ಕೋಟಿ ಮತದಾರರು ಮ್ಯಾಪ್ ಆಗಿಲ್ಲವೆಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಎಸ್ಐಆರ್ ಪ್ರಕ್ರಿಯೆ ಎಚ್ಚರಿಕೆಯಿಂದ ನಡೆಯಬೇಕಿದ್ದು, ಯಾವುದೇ ಮತದಾರರಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಬಿಎಲ್ ಓ ಗಳಿಗೆ ಸೂಚಿಸಲಾಗಿದೆ ಎಂದರು.

ಇದೇ ವೇಳೆ ಮಹಾರಾಷ್ಟ್ರ- ಕರ್ನಾಟಕ ರಾಜ್ಯದ ಗಡಿವಿವಾದ ವಿಚಾರವಾಗಿ, ಗಡಿವಿವಾದ ವಿಚಾರಣೆ ವಿಷಯ ಸುಪ್ರೀಂಕೋರ್ಟ್ ನ ಮುಂದೆ ಬರಲಿದೆ. ಮಹಾರಾಷ್ಟ್ರ ಸರ್ಕಾರ ಗಡಿ ವಿವಾದ ಸಂಬಂಧ ಸಲ್ಲಿಸಿರುವ ಅರ್ಜಿಯ ವಿರುದ್ಧ ವಾದ ಮಂಡಿಸಲು ಕರ್ನಾಟಕ ಕಾನೂನು ತಂಡ ಸಿದ್ಧವಾಗಿದೆ. ರಾಜ್ಯದ ಗಡಿಯ ಬಗ್ಗೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಮಹಾರಾಷ್ಟ್ರದ ಅಧಿಕಾರ ವ್ಯಾಪ್ತಿಗೆ ಬರುತ್ತದೆಯೇ ಎಂಬ ಬಗ್ಗೆಯೇ ನಮ್ಮ ಪ್ರಶ್ನೆಯಿದ್ದು, ಈ ವಿಚಾರ ಮೊದಲು ಇತ್ಯರ್ಥವಾಗಬೇಕು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular