HomeLatest NewsBIG NEWS: ಅಬಕಾರಿ ಇಲಾಖೆಯಲ್ಲಿ ಲಂಚಾವತಾರ ಪ್ರಕರಣ: ಮಾಹಿತಿ ಕೇಳಿದ ಸಿಎಂ: ಸಚಿವರು ನೀಡಿದ ಉತ್ತರವೇನು?

BIG NEWS: ಅಬಕಾರಿ ಇಲಾಖೆಯಲ್ಲಿ ಲಂಚಾವತಾರ ಪ್ರಕರಣ: ಮಾಹಿತಿ ಕೇಳಿದ ಸಿಎಂ: ಸಚಿವರು ನೀಡಿದ ಉತ್ತರವೇನು?

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ವಿರುದ್ಧವೇ ಲಂಚದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರಿಂದ ಮಾಹಿತಿ ಕೇಳಿದ್ದಾರೆ.

ಲಂಚಾವತಾರ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಚಿವ ಆರ್.ಬಿ.ತಿಮ್ಮಾಪುರ ಬಳಿ ಸ್ಪಷ್ಟನೆ ಕೇಳಿದ್ದಾರೆ. ಸಿಎಲ್ 7 ಲೈಸನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದ್ದು, ಆಡಿಯೋ ಆರೋಪದ ಬಗ್ಗೆಯೂ ಸ್ಪಷ್ಟನೆ ಕೇಳಿದ್ದಾರೆ.

ಈ ಬಗ್ಗೆ ಸಮಜಾಯಿಷಿ ನೀಡಿರುವ ಸಚಿವರು ಅಧಿಕಾರಿಗಳತ್ತ ಬೊಟ್ಟು ಮಾಡಿದ್ದಾರೆ. ಅನಗತ್ಯವಾಗಿ ತನ್ನ ಮಗನ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಅಧಿಕಾರಿಗಳು ತಾವು ಲಂಚ ಹೊಡೆಯಲು ನನ್ನ ಮಗನ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಇಂದು ಬಾದಾಮಿಯಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲಿರುವ ಅಬಕಾರಿ ಸಚಿವ ತಿಮ್ಮಾಪುರ, ಪ್ರಕರಣದ ಬಗ್ಗೆ ಇನಷ್ಟು ಸ್ಪಷ್ಟನೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular