HomeLatest NewsBIG NEWS: ಕೇಂದ್ರದಿಂದ ರೈಲು ಪ್ರಯಾಣ ದರ ಹೆಚ್ಚಳ: ರಾಜ್ಯ ಬಿಜೆಪಿ ನಾಯಕರು ಇದನ್ನು ಪ್ರಶ್ನಿಸುವುದೂ...

BIG NEWS: ಕೇಂದ್ರದಿಂದ ರೈಲು ಪ್ರಯಾಣ ದರ ಹೆಚ್ಚಳ: ರಾಜ್ಯ ಬಿಜೆಪಿ ನಾಯಕರು ಇದನ್ನು ಪ್ರಶ್ನಿಸುವುದೂ ಇಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

ದಾವಣಗೆರೆ: ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿದೆ. ಆದರೂ ಈ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಕೇಂದ್ರವನ್ನು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ರೈಲು ಪ್ರಯಾಣ ದರ ಏರಿಕೆ ಮಾಡಿದೆ. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಪ್ರಶ್ನಿಸಲಿ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಚಿತ್ರದುರ್ಗದ ಹಿರಿಯೂರು ಬಳಿ ನಡೆದ ಬಸ್ ಮತ್ತು ಟ್ರಕ್ ಅಪಘಾತ ವಿಚಾರವಾಗಿ ಇದರಲ್ಲಿ ಟ್ರಕ್ ಚಾಲಕನ ತಪ್ಪಿರುವುದಾಗಿ ಮೇಲ್ನೋಟಕ್ಕೆ ಕಂಡು ಬರುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟ್ರಕ್ ವಿಭಜಕವನ್ನು ದಾಟಿ ಬಸ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 4 ಮಹಿಳೆಯರು ಹಾಗೂ ಒಂದು ಮಗು ಹಾಗೂ ಟ್ರಕ್ ಚಾಲಕ ಸಾವಿಗೀಡಾಗಿದ್ದಾರೆ. ಬಸ್ಸುಗಳು ಎಲ್ಲಾ ಸುರಕ್ಷತೆಯ ಕ್ರಮಗಳನ್ನು ಅನುಸರಿಸುವುದು ಅವಶ್ಯಕ. ಅಪಘಾತದ ಬಗ್ಗೆ ತನಿಖೆ ನಡೆಸಲಾಗುವುದು ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular