HomeKarnatakaಮಹಿಳಾ ಮೀಸಲಾತಿ ಜಾರಿಗೆ ತಂದಿದ್ದು ಕಾಂಗ್ರೆಸ್: ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ:...

ಮಹಿಳಾ ಮೀಸಲಾತಿ ಜಾರಿಗೆ ತಂದಿದ್ದು ಕಾಂಗ್ರೆಸ್: ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ: ಸಿಎಂ ಸಿದ್ದರಾಮಯ್ಯ

ಹಾವೇರಿ: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ , ಸಂವಿಧಾನದ 73,74 ನೇ ತಿದ್ದುಪಡಿಗಳನ್ನು ರಾಜೀವ್ ಗಾಂಧಿಯವರು ಪ್ರಧಾನ ಮಂತ್ರಿಯಾಗಿದ್ದಾಗ ತಂದಿದ್ದರು. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ. ಈಗ ಮಾತ್ರ ಮಹಿಳಾ ಮೀಸಲಾತಿಗೆ ಒತ್ತಾಯಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದರು.

ಕ್ಷೇತ್ರ ಮರುವಿಂಗಡನೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ. ದಕ್ಷಿಣದಲ್ಲಿ 50% ಮಾಡಿದರೆ ಉತ್ತರ ಪ್ರದೇಶದಲ್ಲಿ 80 ಸ್ಥಾನಗಳಿವೆ. ಅಲ್ಲಿಗೆ 120 ಸ್ಥಾನಗಳಾಗುತ್ತವೆ. ಕರ್ನಾಟಕದಲ್ಲಿ 42 ಸ್ಥಾನಗಳಾಗುತ್ತವೆ. ಉತ್ತರ ಭಾರತದಲ್ಲಿ ಸ್ಥಾನಗಳು ಹೆಚ್ಚಾಗುವುದರ ಬಗ್ಗೆ ನಮ್ಮ ವಿರೋಧವೇ ಹೊರತು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ. ಅದರ ಪರವಾಗಿದ್ದೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂವಿಧಾನ ತಿದ್ದುಪಡಿಗೆ ಮೂರನೇ ಎರಡರಷ್ಟು ಬಹುಮತ ಲೋಕಸಭೆಯಲ್ಲಿ ಇರಬೇಕು. 50% ರಾಜ್ಯಗಳು ಇದಕ್ಕೆ ಒಪ್ಪಿಗೆ ನೀಡಬೇಕು ಎಂದರು. ಕ್ಷೇತ್ರ ಮರು ವಿಂಗಡಣೆಗೆ ವಿರೋಧ ಮಾಡಿದ್ದೇವೆ ಹೊರತು ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದರು.

ಪ್ರಧಾನಿ ನರೇಂದ್ರ ಮೋದಿಯವರು ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಗಳು ಎಂದು ಭಾಷಣ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ತಮಿಳುನಾಡು , ಪಶ್ಚಿಮ ಬಂಗಾಳದ ಚುನಾವಣೆ ಇರುವುದರಿಂದ ಮೋದಿಯವರು ರಾಜಕೀಯ ಮಾಡುತ್ತಿದ್ದಾರೆ ಎಂದರು.

450 ಮತಗಳನ್ನು ಪಡೆದು ಅಂಗೀಕಾರವಾಗಿರುವ ಮಸೂದೆಯನ್ನು ಮೋದಿಯವರು ಏಕೆ ಜಾರಿಮಾಡಲಿಲ್ಲ ಎಂದು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ, ಕ್ಷೇತ್ರ ಮರುವಿಂಗಡನೆಯನ್ನು ಬೇರ್ಪಡಿಸಿ ಮಸೂದೆ ತಂದಿದ್ದರೆ, ಯಾರೂ ವಿರೋಧಿಸುತ್ತಿರಲಿಲ್ಲ. ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಪಕ್ಷ ಎಂದಿಗೂ ವಿರೋಧ ಮಾಡಿಲ್ಲ ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular