BIG NEWS: ಅಪರಾಧ ನಿಯಂತ್ರಣವಾಗದಿದ್ದರೆ ಡಿಸಿಪಿ, ಎಸ್ ಪಿ ಅವರೇ ನೇರ ಹೊಣೆಗಾರರು; ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು: ಠಾಣಾಧಿಕಾರಿಗಳ ಗಮನಕ್ಕೆ ಬರದಂತೆ ಯಾವ ಅಪರಾಧಗಳೂ, ಕರಾಳ ದಂಧೆಗಳೂ ನಡೆಯಲು ಸಾಧ್ಯವಿಲ್ಲ. ಹಿರಿಯ ಪೊಲೀಸ್ ಅಧಿಕಾರಿಗಳು ಠಾಣೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಪೊಲೀಸ್ ಅಧಿಕಾರಿಗಳಿಗೆ ನೀಡಿದ ಸೂಚನೆಗಳ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್ ಪಿ ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸುಳ್ಳು ಸುದ್ದಿ, ವದಂತಿಗಳ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಸ್ವಯಂಪ್ರೇರಿತ ಎಫ್ಐಆರ್ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ದೂರು ಕೊಡುವವರು ಬರಲಿ ಎಂದು ಕಾಯುತ್ತಾ ಕೂರಬಾರದು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಸಿಸಿಬಿ ಯನ್ನು ಇನ್ನಷ್ಟು ಸದೃಢಗೊಳಿಸಲು 230 ಸಿಬ್ಬಂದಿಯನ್ನು ಹೊಸದಾಗಿ ನೇಮಿಸಿಕೊಳ್ಳಲು ಒಪ್ಪಿಗೆ ನೀಡಲಾಗಿದೆ. ಹಿರಿಯ ಅಧಿಕಾರಿಗಳು ಜನ ಸಂಪರ್ಕಕ್ಕೆ ಸಿಗದೇ ಹೋದರೆ, ಜನ ಸ್ನೇಹಿ ಆಗದೇ ಹೋದರೆ ಅಂತಹ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read