HomeKarnatakaಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ: ಜಮೀರ್ ಅಹ್ಮದ್ ವಿರುದ್ಧ ಸಿದ್ದರಾಮಯ್ಯ ಕಿಡಿ; ಕೈತಪ್ಪಿದ ಸಚಿವ...

ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ: ಜಮೀರ್ ಅಹ್ಮದ್ ವಿರುದ್ಧ ಸಿದ್ದರಾಮಯ್ಯ ಕಿಡಿ; ಕೈತಪ್ಪಿದ ಸಚಿವ ಸ್ಥಾನ

ಬೆಂಗಳೂರು: ದಾವಣಗೆರೆ ಉಪಚುನಾವಣೆಯಲ್ಲಿ ಜಮೀರ್ ಅಹ್ಮದ್ ಖಾನ್ ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಆರೋಪ ಕೇಳಿಬಂದಿದ್ದು, ಇದೇ ಕಾರಣಕ್ಕೆ ಜಮೀರ್ ಅಹ್ಮದ್ ಅವರಿಗೆ ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದಲ್ಲಿ ಸಚಿವ ಸ್ಥಾನ ಕೈತಪ್ಪಿದೆ ಎನ್ನಲಾಗಿದೆ.

ಜಮೀರ್ ಅಹ್ಮದ್ ನಡೆಗೆ ಸ್ವತಃ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಮೀರ್ ಬೆಂಬಲಗಿರು ನಿನ್ನೆ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಜಮೀರ್ ಅಹ್ಮದ್ ಅವರುಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದರು. ಈ ವೇಳೆ ಸಿದ್ದರಾಮಯ್ಯ ಜಮೀರ್ ಅಹ್ಮದ್ ವಿರುದ್ಧ ಗರಂ ಆದ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಮೀರ್ ಅಹ್ಮದ್ ವಿರುದ್ದ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಇದರಿಂದಲೇ ಜಮಿರ್ ಅಹ್ಮದ್ ಖಾನ್ ಅವರಿಗೆ ಮಂತ್ರಿ ಸ್ಥಾನ ಕೈತಪ್ಪಿದೆ ಎನ್ನಲಾಗುತ್ತಿದೆ.

ಅವನು ನನ್ನ ಆಪ್ತ ಎಂದು ನೀವೆಲ್ಲಾ ಹೇಳುತ್ತೀರಾ. ಆದ್ರೆ, ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ ಎಂದು ಸಿದ್ದರಾಮಯ್ಯ ಸಿಡಿಮಿಡಿಗೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪಕ್ಷ ವಿರೋಧಿ ಚಟುವಟಿಕೆ ಆರೋಪ ಎದುರಿಸುತ್ತಿರುವ ಜಮೀರ್ ಅಹ್ಮದ್ ಅವರ ಆಡಿಯೋ ವೈರಲ್ ಈ ಹಿಂದೆ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ ಆಗಿರುವುದು ಹಾಗೂ ಅವರ ಹೇಳಿಕೆ ಭಾರೀ ಸಂಚಲನ ಮೂಡಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular