ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ಚರ್ಚೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪವರ್ ಶೇರಿಂಗ್ ವಿಚಾರವಾಗಿ ಎಷ್ಟು ಸಲ ಹೇಳಬೇಕು? ಎಂದು ಗರಂ ಆಗಿ ಪ್ರಶ್ನಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನ ಮಾಡುವ ವಿಚಾರ. ಅವರು ಹೇಳಿದ ಹಾಗೇ ಪಾಲಿಸುತ್ತೇವೆ. ಹೈಕಮಾಂಡ್ ತೀರ್ಮಾನ ಎಲ್ಲರಿಗೂ ಅನ್ವಯವಾಗುತ್ತದೆ ಎಂದು ಹೇಳಿದರು.
ನಾನು ಕಾಂಟ್ರೋವರ್ಸಿ ವಿಚಾರ ಮಾತನಾಡುವುದಿಲ್ಲ. ಡಿ.ಕೆ.ಶಿವಕುಮಾರ್, ರಾಜಣ್ಣ ಅವರವರ ಅಭಿಪ್ರಾಯ ಹೇಳಿದ್ದಾರೆ ಎಂದರು.