ಹೈವೋಲ್ಟೇಜ್ ಕಣವಾದ ವರುಣಾ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ‘ವಿಜಯಾಸ್ತ್ರ’

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕೆಂಬುದನ್ನು ಅಳೆದು ತೂಗಿದ ಸಿದ್ದರಾಮಯ್ಯ ಸೇಫ್ ಎಂದು ವರುಣಾ ಕ್ಷೇತ್ರವನ್ನೇ ಆಯ್ಕೆ ಮಾಡಿಕೊಂಡಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಚಿಂತನೆ ನಡೆಸಿರುವ ಬಿಜೆಪಿ ಬಿ.ವೈ. ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ. ಸುರಕ್ಷಿತ ಕ್ಷೇತ್ರವೆಂದು ವರುಣಾದಲ್ಲಿ ಸ್ಪರ್ದಿಸಲು ಮುಂದಾಗಿರುವ ಸಿದ್ದರಾಮಯ್ಯನವರಿಗೆ ಅಲ್ಲಿಯೂ ಪ್ರಬಲ ಪೈಪೋಟಿ ಎದುರಾಗಲಿದೆ.

ಸಿದ್ದರಾಮಯ್ಯ ವಿರುದ್ಧ ಪ್ರಬಲ ಅಭ್ಯರ್ಥಿಯನ್ನೇ ಬಿಜೆಪಿ ಸ್ಪರ್ಧೆಗೆ ಇಳಿಸಲಿದೆ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವರುಣಾದಲ್ಲಿ ವಿಜಯೇಂದ್ರ ಅವರನ್ನು ಸ್ಪರ್ಧೆಗೆ ಇಳಿಸಲು ಬೇಡಿಕೆ ಇದೆ. ಆದರೆ ಅಭ್ಯರ್ಥಿ ಯಾರು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಹೇಳಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಡಾ. ಯತೀಂದ್ರ ಅವರ ವಿರುದ್ಧ ವಿಜಯೇಂದ್ರ ಸ್ಪರ್ಧೆಗೆ ಮುಂದಾಗಿದ್ದರೂ, ಪಕ್ಷದ ವರಿಷ್ಠರು ಅವಕಾಶ ನೀಡಿರಲಿಲ್ಲ. ಆದರೆ, ಕಳೆದ ಐದು ವರ್ಷಗಳಲ್ಲಿ ವಿಜಯೇಂದ್ರ ಪ್ರಬಲ ನಾಯಕರಾಗಿ ಬೆಳೆದಿದ್ದಾರೆ. ಉಪಚುನಾವಣೆಯಲ್ಲಿ ತಮ್ಮದೇ ಕಾರ್ಯತಂತ್ರಗಳ ಮೂಲಕ ಬಿಜೆಪಿ ಗೆಲ್ಲದ ಕ್ಷೇತ್ರಗಳಲ್ಲಿಯೂ ಪಕ್ಷದ ಅಭ್ಯರ್ಥಿಗಳ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ವಿಜಯೇಂದ್ರ ಅವರ ಸಂಘಟನಾ ಚತುರತೆಗೆ ಮತ್ತು ಜನರನ್ನು ಸೆಳೆಯುವ ತಂತ್ರಕ್ಕೆ ಮಾರುಹೋಗಿದ್ದಾರೆ. ಸಿದ್ದರಾಮಯ್ಯ ಅವರ ಎದುರು ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಅವರನ್ನೇ ಕಣಕ್ಕಿಳಿಸಲು ಬಿಜೆಪಿ ನಾಯಕರು ಚಿಂತನೆ ನಡೆಸಿದ್ದಾರೆ. ಈ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದರಿಂದಾಗಿ ವರುಣಾ ಕ್ಷೇತ್ರ ಈ ಬಾರಿ ಹೈವೋಲ್ಟೇಜ್  ಕಣವಾಗಿ ಮಾರ್ಪಡುವುದು ನಿಶ್ಚಿತ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read