HomeLatest NewsBREAKING: ರಾಹುಲ್ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್: ಕಾಲ್ತುಳಿತ ದುರಂತದ ಬಗ್ಗೆ ಚರ್ಚೆ

BREAKING: ರಾಹುಲ್ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್: ಕಾಲ್ತುಳಿತ ದುರಂತದ ಬಗ್ಗೆ ಚರ್ಚೆ

ನವದೆಹಲಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತವನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್ ಸಿಎಂ ಹಾಗೂ ಡಿಸಿಎಂ ಅವರಿಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ. ಈ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ.

ನವದೆಹಲಿಯ ಎಐಸಿಸಿ ಕಚೇರಿಯ ಇಂದಿರಾ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ.

ಈ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಘಟನೆ ಬಗ್ಗೆ ವಿವರಿಸಿದ್ದಾರೆ. ಘಟನೆ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಹಾಗೂ ನ್ಯಾಯಾಂಗ ತನಿಖೆ, ಸಿಐಡಿ ತನಿಖೆಗೆ ವಹಿಸಿರುವ ಬಗ್ಗೆಯೂ ವಿವರಿಸಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular