HomeLatest NewsBREAKING: ಆರ್.ಎಸ್.ಎಸ್ ಅಂಕುಶ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆಯಾಜ್ಞೆ: ಮೇಲ್ಮನವಿ ಅರ್ಜಿ ಸಲ್ಲಿಸುತ್ತೇವೆ ಎಂದ ಸಿಎಂ...

BREAKING: ಆರ್.ಎಸ್.ಎಸ್ ಅಂಕುಶ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆಯಾಜ್ಞೆ: ಮೇಲ್ಮನವಿ ಅರ್ಜಿ ಸಲ್ಲಿಸುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಆರ್.ಎಸ್.ಎಸ್ ಗೆ ಅಂಕುಶ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಧಾರವಾಡ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿದೆ. ಇದರಿಂದಾಗಿ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಆರ್.ಎಸ್.ಎಸ್ ಸೇರಿದಂತೆ ಯಾವುದೇ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶ ಪ್ರಶ್ನಿಸಿ ಧಾರವಾಡ ಹೈಕೋರ್ಟ್ ಪೀಠಕ್ಕೆ ಪುನಶ್ಚೇತನ ಸೇವಾ ಸಂಸ್ಥೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಪೀಠ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಹೈಕೋರ್ಟ್ ತಡೆಯಾಜ್ಞೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾವು ಮೇಲ್ಮನವಿ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ. ಧಾರವಾಡ ಹೈಕೋರ್ಟ್ ಪೀಠದ ತಡೆಯಾಜ್ಞೆ ತೆರವುಗೊಳಿಸುವಂತೆ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸುತ್ತೇವೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular