HomeKarnatakaವೈಕುಂಠ ಏಕಾದಶಿ ದಿನವೇ ಸಿದ್ದೇಶ್ವರ ಶ್ರೀ ಲಿಂಗೈಕ್ಯ: ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ವೈಕುಂಠ ಏಕಾದಶಿ ದಿನವೇ ಸಿದ್ದೇಶ್ವರ ಶ್ರೀ ಲಿಂಗೈಕ್ಯ: ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ವಿಜಯಪುರ: ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀ ಅಸ್ತಂಗತರಾಗಿದ್ದು, ಜ್ಞಾನಯೋಗಾಶ್ರಮದಿಂದ ಪಾರ್ಥಿವ ಶರೀರದ ಮೆರವಣಿಗೆ ಆರಂಭವಾಗಿದೆ.

ವಿಜಯಪುರ ಸೈನಿಕ ಶಾಲೆಯತ್ತ ಪಾರ್ಥಿವ ಶರೀರ ಮೆರವಣಿಗೆ ಸಾಗಿದ್ದು, ಅಪಾರ ಸಂಖ್ಯೆಯ ಭಕ್ತರು ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಅಲಂಕೃತ ವಾಹನದಲ್ಲಿ ಶ್ರೀಗಳ ಪಾರ್ಥಿವ ಶರೀರದ ಮೆರವಣಿಗೆ ಸಾಗಿದೆ. ವಿಜಯಪುರ ಸೈನಿಕ ಶಾಲೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತತ್ವಶಾಸ್ತ್ರದಲ್ಲಿ ಎಂಎ ಪದವೀಧರರಾದ ಅವರು ಕನ್ನಡ, ಸಂಸ್ಕೃತ, ಇಂಗ್ಲೀಷ್, ಹಿಂದಿ ಸೇರಿದಂತೆ ಐದು ಭಾಷೆಗಳಲ್ಲಿ ಪರಿಣಿತರಾಗಿದ್ದರು. ಆಧ್ಯಾತ್ಮದ ಬಗ್ಗೆ ಆಳವಾದ ಅಧ್ಯಯನ ನಡೆಸಿದ್ದರು. ಇಂದು ಸಂಜೆ ಆಶ್ರಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ವಿಜಯಪುರ ಸೈನಿಕ ಶಾಲೆ ಆವರಣದಲ್ಲಿ ಸಾರ್ವಜನಿಕರು, ಭಕ್ತರು, ಗಣ್ಯರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular