HomeEntertainmentBIG NEWS: ತಮಿಳು ಸಿನಿಮಾ ಪತ್ರಿಕಾಗೋಷ್ಠಿಗೆ ಕನ್ನಡ ಹೋರಾಟಗಾರರ ವಿರೋಧ: ಹೊರ ನಡೆದ ನಟ ಸಿದ್ದಾರ್ಥ್

BIG NEWS: ತಮಿಳು ಸಿನಿಮಾ ಪತ್ರಿಕಾಗೋಷ್ಠಿಗೆ ಕನ್ನಡ ಹೋರಾಟಗಾರರ ವಿರೋಧ: ಹೊರ ನಡೆದ ನಟ ಸಿದ್ದಾರ್ಥ್

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು, ರೈತರು ಹೋರಾಟ ನಡೆಸಿದ್ದಾರೆ.

ಸೆ. 29 ರಂದು ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಇದೇ ವೇಳೆ ಗುರುವಾರ ತಮಿಳು ನಟ ಸಿದ್ದಾರ್ಥ್ ಬೆಂಗಳೂರಿನಲ್ಲಿ ‘ಚಿಕ್ಕು’ ತಮಿಳು ಚಿತ್ರದ ಪತ್ರಿಕಾಗೋಷ್ಠಿ ಮತ್ತು ಪ್ರದರ್ಶನ ಆಯೋಜಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪತ್ರಿಕಾಗೋಷ್ಠಿ ನಡೆಯುವ ಸ್ಥಳಕ್ಕೆ ಆಗಮಿಸಿದ ಕನ್ನಡ ಪರ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಹರಿದು ಹೋಗುತ್ತಿದೆ. ರಾಜ್ಯದಲ್ಲಿ ಹೋರಾಟ ನಡೆಯುತ್ತಿದೆ. ಇಲ್ಲಿ ತಮಿಳು ಸಿನಿಮಾ ಬಗ್ಗೆ ಪತ್ರಿಕಾಗೋಷ್ಠಿ ಮಾಡುತ್ತಿದ್ದೀರಿ. ಇನ್ನೊಂದು ದಿನ ಪತ್ರಿಕಾಗೋಷ್ಠಿ ಮಾಡಿ ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರಿನ ಎಸ್.ಆರ್.ವಿ. ಧಿಯೇಟರ್ ನಲ್ಲಿ ‘ಚಿಕ್ಕು’ ತಮಿಳು ಸಿನಿಮಾ ಕನ್ನಡ ಅವತರಣಿಕೆ ಪ್ರದರ್ಶನ ಆಯೋಜಿಸಲಾಗಿತ್ತು. ಸಿದ್ಧಾರ್ಥ್ ಸುದ್ದಿಗೋಷ್ಠಿ ನಡೆಸುವಾಗ ಕರವೇ ಸ್ವಾಭಿಮಾನಿ ಸೇನೆ ವಿರೋಧ ವ್ಯಕ್ತಪಡಿಸಿದೆ. ಇನ್ನೊಂದು ದಿನ ಪತ್ರಿಕಾಗೋಷ್ಠಿ ಇಟ್ಟುಕೊಳ್ಳಿ. ಈಗ ನಿಲ್ಲಿಸಿ ಎಂದು ಕನ್ನಡ ಪರ ಹೋರಾಟಗಾರರು ಆಗ್ರಹಿಸಿದ್ದು, ಈ ವೇಳೆ ಸಿದ್ದಾರ್ಥ್ ಪತ್ರಿಕಾಗೋಷ್ಠಿಯಿಂದ ಹೊರ ನಡೆದಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular