ತಮಿಳು ನಟ ಸಿದ್ದಾರ್ಥ್ ಕ್ಷಮೆ ಯಾಚಿಸಿದ ಪ್ರಕಾಶ್ ರಾಜ್

ಬೆಂಗಳೂರು: ತಮಿಳು ನಟ ಸಿದ್ದಾರ್ಥ್ ನಟನೆಯ ‘ಚಿಕ್ಕು’ ಸಿನಿಮಾ ಗುರುವಾರ ಬಿಡುಗಡೆಯಾಗಿದೆ. ಸಿನಿಮಾದ ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಕನ್ನಡ ಪರ ಹೋರಾಟಗಾರರು ಅಡ್ಡಿಪಡಿಸಿದ್ದರು.

ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ‘ಚಿಕ್ಕು’ ಗುರುವಾರ ಬಿಡುಗಡೆಯಾಗಿದ್ದು, ಕನ್ನಡ ಅವತರಣಿಕೆ ಪ್ರದರ್ಶನ ಮತ್ತು ಪತ್ರಿಕಾಗೋಷ್ಠಿ ಮಲ್ಲೇಶ್ವರಂನ ಎಸ್.ಆರ್.ವಿ. ಥಿಯೇಟರ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಿದ್ದಾರ್ಥ್ ಸುದ್ದಿಗೋಷ್ಠಿ ನಡೆಸುವ ವೇಳೆ ಏಕಾಏಕಿ ನುಗ್ಗಿದ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಪತ್ರಿಕಾಗೋಷ್ಠಿಗೆ ಅಡ್ಡಿಪಡಿಸಿದ್ದರು.

ಈ ಬಗ್ಗೆ ಪ್ರಕಾಶ್ ರಾಜ್ ಸಿದ್ದಾರ್ಥ್ ಬಳಿ ಕ್ಷಮೆಯಾಚಿಸಿದ್ದಾರೆ. ಕಾವೇರಿ ನಮ್ಮದು. ಆದರೆ, ದಶಕಗಳ ಕಾಲ ಈ ಸಮಸ್ಯೆಯನ್ನು ಪರಿಹರಿಸಲಾಗದ ಎಲ್ಲಾ ಅಸಮರ್ಥ ರಾಜಕೀಯ ಪಕ್ಷಗಳ ನಾಯಕರನ್ನು ಪ್ರಶ್ನಿಸದೆ, ಕೇಂದ್ರ ಸರ್ಕಾರಕ್ಕೆ ಒತ್ತಡ ತರದೆ, ನಾಲಾಯಕ್ ಸಂಸದರನ್ನು ತರಾಟೆಗೆ ತೆಗೆದುಕೊಳ್ಳದೆ ಹೀಗೆ ಅಸಹಾಯಕ ಜನಸಾಮಾನ್ಯರನ್ನು, ಕಲಾವಿದರನ್ನು ಹಿಂಸಿಸುವುದು ತಪ್ಪು. ಒಬ್ಬ ಕನ್ನಡಿಗನಾಗಿ ಸಹೃದಯ ಕನ್ನಡಿಗರ ಪರವಾಗಿ ಸಿದ್ಧಾರ್ಥ್ ಕ್ಷಮೆಯಾಚಿಸುತ್ತೇನೆ ಎಂದು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದಾರೆ.

https://twitter.com/prakashraaj/status/1707412745048780980

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read